ನೂಪುರ್ ಶರ್ಮಾ ಹೇಳಿಕೆಗೆ ಬೆಂಬಲ ನೀಡಿದ ವ್ಯಕ್ತಿಯ ಶಿರಚ್ಛೇದ

Udaipur

ಮಂಗಳವಾರ ರಾಜಸ್ಥಾನದ(Rajasthan) ಉದಯಪುರದಲ್ಲಿ(Udaipur) ಹಿಂದೂ ಟೈಲರ್ ಕನ್ಹಯ್ಯಾ ಲಾಲ್(Kannaiah Lal) ಅವರನ್ನು ಹತ್ಯೆ ಮಾಡಿದ ಇಬ್ಬರು ವ್ಯಕ್ತಿಗಳು ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆ ಎಂದು ಹೇಳಲಾಗಿದೆ. ಉದಯಪುರ ಹತ್ಯೆಯ(Murder) ದೃಶ್ಯ ಕ್ಯಾಮರಾದಲ್ಲಿ ದಾಖಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ(Social Media) ವೈರಲ್(Viral) ಆಗಿದೆ. ಈ ವೀಡಿಯೊವನ್ನು ದುಷ್ಕರ್ಮಿಗಳು ಹತ್ಯೆ ಮಾಡಿ, ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ ಕೊಡುವ ಮೂಲಕ ಪೋಸ್ಟ್‌ ಮಾಡಿದ್ದಾರೆ.

ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ(Nupur Sharma) ಅವರ ಪ್ರವಾದಿ ವಿರುದ್ಧದ ಹೇಳಿಕೆಗಳನ್ನು ಬೆಂಬಲಿಸಿ, ಸಾಮಾಜಿಕ ಮಾಧ್ಯಮವಾದ ವಾಟ್ಸಾಪ್ ಸ್ಟೇಟಸ್ ನಲ್ಲಿ ಪೋಸ್ಟ್‌ ಮಾಡಿದ ಕಾರಣಕ್ಕೆ ಕನ್ಹಯ್ಯಾ ಲಾಲ್ ಅವರನ್ನು ಕೊಲ್ಲಲಾಗಿದೆ ಎಂದು ಹೇಳಲಾಗಿದೆ. ಕನ್ಹಯ್ಯಾ ಲಾಲ್ ಅವರನ್ನು ಕೊಂದ ಹಂತಕರು, ಗೌಸ್ ಮೊಹಮ್ಮದ್ ಮತ್ತು ರಿಯಾಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಘಟನೆಯ ನಂತರ ಕೊಲೆಯನ್ನು ತಾವೇ ಮಾಡಿದ್ದು ಎಂದು ಒಪ್ಪಿಕೊಂಡಿದ್ದಲ್ಲದೇ, ಮತ್ತೊಂದು ವೀಡಿಯೊದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕೊಲೆ ಬೆದರಿಕೆ ಹಾಕಿದ್ದಾರೆ.

ಜೂನ್ 17 ರಂದು ರೆಕಾರ್ಡ್ ಮಾಡಲಾದ ಮೂರನೇ ವೀಡಿಯೊ ಮಂಗಳವಾರ ಕೊಲೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಆ ವೀಡಿಯೊದಲ್ಲಿ, ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರು ಮಂಗಳವಾರ ಉದಯಪುರದಲ್ಲಿ ನಡೆದಂತಹ ಕೃತ್ಯವನ್ನು ನಡೆಸುವ ಉದ್ದೇಶವನ್ನು ವೀಡಿಯೊದಲ್ಲಿ ವಿವರಿಸಿದ್ದಾರೆ. ಹತ್ಯೆಯ ನಂತರ ಹೊರಬಂದ ವೀಡಿಯೊಗಳು ಕನ್ಹಯ್ಯಾ ಲಾಲ್ ಅವರ ದೇಹವನ್ನು ಅವರ ಅಂಗಡಿಯ ಹೊರಗೆ ಪಾದಚಾರಿ ಮಾರ್ಗದಲ್ಲಿ ಬಿದ್ದಿರುವುದನ್ನು ತೋರಿಸಿದೆ.

ವರ್ತಕರು ಮತ್ತು ಹಿಂದೂ ಸಂಘಟನೆಗಳು ಸ್ಥಳಕ್ಕೆ ಆಗಮಿಸಿ ಶವವನ್ನು ತೆಗೆದುಕೊಳ್ಳಲು ಅಧಿಕಾರಿಗಳು ನಿರಾಕರಿಸಿದ್ದರಿಂದ ಶವವನ್ನು ಹೊರತೆಗೆಯಲು ವಿಳಂಬವಾಗಿದೆ ಎನ್ನಲಾಗಿದೆ. ಕನ್ಹಯ್ಯ ಲಾಲ್ ಅವರ ಕುಟುಂಬಕ್ಕೆ ಆರ್ಥಿಕ ನೆರವು ಮತ್ತು ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಕನ್ಹಯ್ಯಾ ಲಾಲ್ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಆರೋಪಿಗಳು ಬೆದರಿಕೆ ಹಾಕುತ್ತಿರುವ ವಿಡಿಯೋ ಹೊರಬಿದ್ದ ಬಳಿಕ ಪ್ರಧಾನಿ ಮೋದಿಯವರ ಜೀವಕ್ಕೆ ಒಡ್ಡಿರುವ ಬೆದರಿಕೆಯನ್ನು ನಿರ್ಣಯಿಸಲು ಭದ್ರತಾ ಏಜೆನ್ಸಿಗಳು ಈಗ ವಿವರವಾದ ಶೀಘ್ರ ತನಿಖೆಯನ್ನು ಆರಂಭಿಸಿವೆ.

ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ಮಂಗಳವಾರ ರಾಜಸ್ಥಾನದಾದ್ಯಂತ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ. ಸದ್ಯ ಈ ಕುರಿತು ಹೆಚ್ಚಿನ ತನಿಖೆ ಚುರುಕಾಗಿ ಸಾಗುತ್ತಿದೆ.

Exit mobile version