‘ರಾಜೀವ್ ಗಾಂಧಿ ಖೇಲ್ ರತ್ನ’ ಪ್ರಶಸ್ತಿ ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’: ಮೋದಿ ಘೋಷಣೆ

ನವದೆಹಲಿ, ಆ. 06: ‘ರಾಜೀವ್ ಗಾಂಧಿ ಖೇಲ್ ರತ್ನ’ ಪ್ರಶಸ್ತಿಯ ಹೆಸರು ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಆಗಿರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಖೇಲ್ ರತ್ನ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಅವರ ಹೆಸರಿಡುವಂತೆ ಅನೇಕ ನಾಗರಿಕರಿಂದ ಮನವಿಗಳು ಬಂದಿವೆ. ಅವರ ಅಭಿಪ್ರಾಯಗಳನ್ನು ಅವರನ್ನು ಗೌರವಿಸಿ ಪ್ರಶಸ್ತಿಯ ಹೆಸರನ್ನು ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಎಂದು ಕರೆಯಲಾಗುವುದು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಭಾರತಕ್ಕೆ ಗೌರವ ತಂದುಕೊಟ್ಟ ಮತ್ತು ದೇಶದ ಹೆಮ್ಮೆಯ ಕ್ರೀಡಾಪಟುಗಳಲ್ಲಿ ಮೇಜರ್ ಧ್ಯಾನ್ ಚಂದ್ ಅಗ್ರಗಣ್ಯರು. ದೇಶದ ಅತ್ಯುನ್ನತ ಕ್ರೀಡಾ ಗೌರವಕ್ಕೆ ಧ್ಯಾನ್‌ ಚಂದ್ ಅವರ ಹೆಸರನ್ನು ಇಡುವುದು ಸೂಕ್ತವಾಗಿದೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

Latest News

ದೇಶ-ವಿದೇಶ

ರೇಷನ್ ಕಾರ್ಡ್ ಹೊಂದಿರುವ ಬಡವರಿಗೆ ರಾಷ್ಟ್ರಧ್ವಜ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ : ರಾಹುಲ್ ಗಾಂಧಿ

ಇದು ಬಿಜೆಪಿ ಸರ್ಕಾರದ ಪ್ರಚಾರ ಪಿತೂರಿ. ಈ ರೀತಿ ಮಾಡುವ ಮೂಲಕ ಬಿಜೆಪಿಯು “ರಾಷ್ಟ್ರೀಯತೆ”ಯನ್ನು ಮಾರಾಟ ಮಾಡುತ್ತಿದೆ ಮತ್ತು ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.