ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ : ಪದವಿ ಪಾಸಾದವರಿಗೆ ರೂ.60,000 ಸ್ಟೈಫಂಡ್

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯು ‘ರಾಜೀವ್ ಗಾಂಧಿ ಪಂಚಾಯತ್ ರಾಜ್ (RajivGandhi Panchayat Raj Fellowship) ಫೆಲೋಶಿಪ್’ ಯೋಜನೆಯಡಿ 51 ಹುದ್ದೆಗಳಿಗೆ ಅರ್ಹ

ಯುವ ವೃತ್ತಿಪರರಿಂದ ಅಧಿಕೃತ ಅರ್ಜಿಗಳನ್ನು ಆಹ್ವಾನಿಸಿದೆ. ಈ ಫೆಲೋಶಿಪ್ ಪಡೆಯಲು ಬೇಕಾದ ಅರ್ಹತೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

ನೇಮಕಾತಿ ಪ್ರಾಧಿಕಾರ : ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಹುದ್ದೆ ಹೆಸರು : ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್
ಒಟ್ಟು ಹುದ್ದೆಗಳ ಸಂಖ್ಯೆ : 51

ಫೆಲೋಶಿಪ್ ಪಡೆಯಲು ಬೇಕಾದ ಅರ್ಹತೆಗಳು

ಅರ್ಜಿ ಸಲ್ಲಿಸುವವರ ವಯೋಮಿತಿಯು 32 ವರ್ಷದೊಳಗಿರಬೇಕು.
ಅಭ್ಯರ್ಥಿಗಳು ಕಡ್ಡಾಯವಾಗಿ ಕನ್ನಡವನ್ನು ಮಾತನಾಡಲು, ಓದಲು ಮತ್ತು ಬರೆಯಲು ತಿಳಿದಿರಬೇಕು.
ಅಭ್ಯರ್ಥಿಯು ಸಮಾಜಶಾಸ್ತ್ರ ಅರ್ಥಶಾಸ್ತ್ರ ಗ್ರಾಮೀಣಾಭಿವೃದ್ಧಿ, ಸಮಾಜಕಾರ್ಯ ಅಥವಾ ಸಾರ್ವಜನಿಕ ನೀತಿ ವಿಷಯಗಳಲ್ಲಿ ಪದವಿ ಪಡೆದಿರಬೇಕು.
ಗ್ರಾಮೀಣಾಭಿವೃದ್ಧಿಯಲ್ಲಿ ಅನುಭವ ಹೊಂದಿದ್ದಲ್ಲಿ ಹೆಚ್ಚುವರಿ ಅಂಕಗಳೊಂದಿಗೆ ಪರಿಗಣಿಸಲಾಗುವುದು.
ಕ್ಷೇತ್ರಮಟ್ಟದ ಅನುಭವ ಹೊಂದಿರುವ ಅಭ್ಯರ್ಥಿಗಳ ಕಾರ್ಯಕ್ಷಮತೆ ಮೌಲ್ಯಮಾಪನಕ್ಕೊಳಪಟ್ಟು ಆದ್ಯತೆ ನೀಡಲಾಗುವುದು.
ಎಂ.ಫಿಲ್ ಅಥವಾ ಪಿಹೆಚ್.ಡಿ ಪದವಿ ಅಭ್ಯರ್ಥಿಗಳಿಗೆ ಹೆಚ್ಚುವರಿ ಆಧ್ಯತೆ ನೀಡಲಾಗುವುದು.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಫೆಲೋಶಿಪ್ ಅವಧಿ : ಎರಡು ವರ್ಷಗಳು

ಮಾಸಿಕ ಸ್ಟೈಫಂಡ್ : ರೂ.60,000. (ಮಾಸಿಕ ರೂ.1500 ಪ್ರಯಾಣ ಭತ್ಯೆ ನೀಡಲಾಗುತ್ತದೆ.)

ಸೂಚನೆ : ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RajivGandhi Panchayat Raj Fellowship) ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಮತ್ತು

ಅಂಚೆ ಅಥವಾ ಕೊರಿಯರ್ ಮೂಲಕ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಇನ್ನು ಆಯ್ಕೆಯಾದ ಅಭ್ಯರ್ಥಿಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶದ 7 ಜಿಲ್ಲೆಗಳ ಪ್ರತಿ ತಾಲ್ಲೂಕಿಗೆ

ಒಬ್ಬರನ್ನು ನಿಯೋಜನೆಗೊಳಿಸಲಾಗುತ್ತದೆ.

ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 05-02-2024

ಅಧಿಸೂಚನೆಗಾಗಿ ಕ್ಲಿಕ್ ಮಾಡಿ : https://prcrdpr.karnataka.gov.in/storage/pdf-files/Notifications/20240120165704.pdf

ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ : https://crispindia.net/rgpr-fellowship-karnataka/application_form.php

ಇದನ್ನು ಓದಿ: ಬಾಯ್ಕಾಟ್ ಮಾಲ್ಡೀವ್ಸ್ ಎಫೆಕ್ಟ್ – 5ನೇ ಸ್ಥಾನಕ್ಕೆ ಕುಸಿದ ಭಾರತೀಯ ಪ್ರವಾಸಿಗರ ಸಂಖ್ಯೆ

Exit mobile version