download app

FOLLOW US ON >

Monday, August 8, 2022
Breaking News
ನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!
English English Kannada Kannada

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಒಲಿದ ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಮಾನ

ಅಜಾದ್​ ಅವರು ಜಮ್ಮು ಕಾಶ್ಮೀರ ಕ್ಷೇತ್ರದಿಂದ ಕಾಂಗ್ರೆಸ್​ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಮಂಗಳವಾರ ರಾಜ್ಯಸಭಾದಿಂದ ನಿವೃತ್ತಿ ಹೊಂದಿದ ನಾಲ್ವರು ಸದಸ್ಯರಲ್ಲಿ ಅಜಾದ್​ ಸಹ ಒಬ್ಬರು. ಅಜಾದ್​ ಅವರಿಗೆ ಮೇಲ್ಮನೆಯಲ್ಲಿ ಒಳ್ಳೆಯ ಬೀಳ್ಕೊಡುಗೆ ಸಹ ಸಿಕ್ಕಿತು. ಅಜಾದ್​ ಕುರಿತು ಮಾತನಾಡುವಾಗ ಪ್ರಧಾನಿ ಮೋದಿ ಅವರು ಕಣ್ಣೀರು ಸಹ ಹಾಕಿದ್ದರು.

ನವದೆಹಲಿ, ಫೆ. 12: ಗುಲಾಂ ನಬಿ ಅಜಾದ್ ನಿವೃತ್ತಿಯಿಂದ ತೆರವಾದ ರಾಜ್ಯಸಭಾ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಲಿದ್ದು, ಈ ಬಗ್ಗೆ ರಾಜ್ಯಸಭಾ ಚೇರ್​ಮನ್​​ಗೆ ಕಾಂಗ್ರೆಸ್​ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಅಜಾದ್​ ಅವರು ಜಮ್ಮು ಕಾಶ್ಮೀರ ಕ್ಷೇತ್ರದಿಂದ ಕಾಂಗ್ರೆಸ್​ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಮಂಗಳವಾರ ರಾಜ್ಯಸಭಾದಿಂದ ನಿವೃತ್ತಿ ಹೊಂದಿದ ನಾಲ್ವರು ಸದಸ್ಯರಲ್ಲಿ ಅಜಾದ್​ ಸಹ ಒಬ್ಬರು. ಅಜಾದ್​ ಅವರಿಗೆ ಮೇಲ್ಮನೆಯಲ್ಲಿ ಒಳ್ಳೆಯ ಬೀಳ್ಕೊಡುಗೆ ಸಹ ಸಿಕ್ಕಿತು. ಅಜಾದ್​ ಕುರಿತು ಮಾತನಾಡುವಾಗ ಪ್ರಧಾನಿ ಮೋದಿ ಅವರು ಕಣ್ಣೀರು ಸಹ ಹಾಕಿದ್ದರು.

ಅಜಾದ್​ ಬಗ್ಗೆ ಮಾತನಾಡಿದ್ದ ಪ್ರಧಾನಿ ಮೋದಿ ಅಜಾದ್​ ಅವರ ಸ್ಥಾನವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಅವರು ರಾಜಕೀಯ ಮಾತ್ರವಲ್ಲದೆ, ದೇಶ ಮತ್ತು ರಾಜ್ಯಸಭಾ ಜತೆಗೆ ನಿಕಟ ಸಂಬಂಧವನ್ನು ಹೊಂದಿದ್ದರು ಎಂದು ಮೆಚ್ಚುಗೆಯ ಮಾತುಗಳನ್ನು ಆಡಿದ್ದರು.

ಇದೀಗ ಅಜಾದ್​ ನಿವೃತ್ತಿಯಿಂದ ತೆರವಾದ ಸ್ಥಾನಕ್ಕೆ ಖರ್ಗೆ ಅವರನ್ನು ಕಾಂಗ್ರೆಸ್​ ಆಯ್ಕೆ ಮಾಡಿದ್ದು, ಇನ್ನು ಮುಂದೆ ರಾಜ್ಯಸಭೆಯಲ್ಲಿ ಕಾಂಗ್ರೆಸ್​ ಅನ್ನು ಖರ್ಗೆ ಅವರು ಮುನ್ನೆಡೆಸಲಿದ್ದಾರೆ. ಅಜಾದ್​ ಅವರು ಫೆ. 15ರಂದು ನಿವೃತ್ತಿಯನ್ನು ಹೊಂದಲಿದ್ದಾರೆ. 

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article