ರಾಜ್ಯದ ಹಲವೆಡೆ ಮಳೆಯಾಗಲಿದೆ – ಹವಾಮಾನ ಇಲಾಖೆ

ಬೆಂಗಳೂರು,ಫೆ.19 : ರಾಜ್ಯದ ಹಲವೆಡೆ ಮುಂದಿನ 2-3 ದಿನಗಳವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಕಾರಣದಿಂದಾಗಿ, ಮಧ್ಯ ಹಾಗೂ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.

ಕೇರಳದಿಂದ ಮಹಾರಾಷ್ಟ್ರದವರೆಗೂ ವಾಯುಭಾರ ಕುಸಿತದ ಪರಿಣಾಮವಿರುವುದರಿಂದ  ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇದರ ಪರಿಣಾಮವಾಗಿ ಬಾಗಲಕೋಟೆ, ಬಿಜಾಪುರ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ. ಕಾರವಾರ, ಶಿರಸಿ, ಹಳಿಯಾಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುಸ್ಸೂಚನೆ ನೀಡಿದೆ.

Exit mobile version