ರಾಜ್ಯದಲ್ಲಿ ಕೊರೊನಾ‌ ಆತಂಕ ಕಡಿಮೆಯಾಗಿಲ್ಲ, ಮುನ್ನೆಚ್ಚರಿಕೆ ವಹಿಸಿ: ಬಿಎಸ್‌ವೈ

ಬೆಂಗಳೂರು, ಡಿ. 30: ರಾಜ್ಯದಲ್ಲಿ ಕೊರೊನಾ ಆತಂಕ ಇನ್ನೂ ಕಡಿಮೆಯಾಗದ‌ ಹಿನ್ನೆಲೆಯಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ತೋರದೆ, ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಬಗ್ಗೆ ‌ಟ್ವೀಟ್ ಮಾಡಿರುವ ಅವರು, ಸಾರ್ವಜನಿಕ ಬಂಧುಗಳೇ, ಕೊರೊನಾ ಅಪಾಯ ಇನ್ನೂ ತಗ್ಗಿಲ್ಲ. ಹೊಸ ವರ್ಷಕ್ಕೆ ಕಾಲಿಡುತ್ತಿರುವ ಈ ಹೊತ್ತಿನಲ್ಲಿ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸಹಕರಿಸಿ, ಸುರಕ್ಷಿತವಾಗಿರಿ ಎಂದು ಮನವಿ ಮಾಡಿದರು.

Exit mobile version