ಬೆಂಗಳೂರು, ಡಿ. 19: ರಾಜ್ಯದಲ್ಲಿ ಕೊರೊನಾ ಆತಂಕ ಕಡಿಮೆಯಾಗುತ್ತಿರುವ ಬೆನ್ನಲ್ಲೇ, ಶಾಲೆ ಆರಂಭಕ್ಕೆ ಚಿಂತನೆ ನಡೆಸಿರುವ ರಾಜ್ಯ ಸರ್ಕಾರ, ಶಾಲೆ ಆರಂಭಕ್ಕೆ ಮುಹೂರ್ತ ಫಿಕ್ಸ್ ಮಾಡಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಜನವರಿ 1ರಿಂದ 10ನೇ ತರಗತಿ ಹಾಗೂ 12ನೇ ತರಗತಿ ಆರಂಭವಾಗುತ್ತದೆ. ಜನವರಿ 1ರಿಂದ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಯೋಜನೆಯಡಿ ತರಗತಿಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.
ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಟ್ವಿಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, 2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ: ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.