ರಾಜ್ಯದಲ್ಲಿ ಜುಲೈ 7 ಮತ್ತು 8ರಂದು ಸಿಇಟಿ ಪರೀಕ್ಷೆ: ಡಾ. ಅಶ್ವಥ್ ನಾರಾಯಣ್

ಬೆಂಗಳೂರು: ಪ್ರಸಕ್ತ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜುಲೈ 7 ಮತ್ತು 8ರಂದು ನಡೆಯಲಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಈ ಬಗ್ಗೆ ಮಾತನಾಡಿರುವ ಉನ್ನತ ಶಿಕ್ಷಣ ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳು ಆಗಿರುವ ಡಾ. ಅಶ್ವಥ್ ನಾರಾಯಣ್, ಕನ್ನಡ ಪರೀಕ್ಷೆಯನ್ನು ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳು ಬರೆಯಲಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಜಿನಿಯರಿಂಗ್‌, ಕೃಷಿ ವಿಜ್ಞಾನ, ಪಶುವೈದ್ಯ, ಯೋಗ ಮತ್ತು ನ್ಯಾಚುರೋಪಥಿ, ಬಿ ಫಾರ್ಮ, ಫಾರ್ಮ-ಡಿ ಸೇರಿ ಇನ್ನಿತರೆ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಆಯೋಜಿಸಿದೆ. ಅಲ್ಲದೇ ರಾಷ್ಟ್ರ ಹಾಗೂ ರಾಜ್ಯದ ಇತರ ಪರೀಕ್ಷೆಗಳ ದಿನಾಂಕವನ್ನು ಗಮನದಲ್ಲಿಟ್ಟುಕೊಂಡು ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಜುಲೈ 7, 2021 ಬುಧವಾರ ಬೆಳಗ್ಗೆ 10.30ರಿಂದ 11.50: ಜೀವವಿಜ್ಞಾನ ಜುಲೈ 7, 2021 ಬುಧವಾರ ಮಧ್ಯಾಹ್ನ 2.30ರಿಂದ 3.50: ಗಣಿತ ಜುಲೈ 8, 2021 ಗುರುವಾರ ಬೆಳಗ್ಗೆ 10.30ರಿಂದ 11.50: ಭೌತ ವಿಜ್ಞಾನ ಜುಲೈ 8, 2021 ಗುರುವಾರ ಮಧ್ಯಾಹ್ನ 2.30ರಿಂದ 3.50: ರಸಾಯನವಿಜ್ಞಾನ ಜುಲೈ 9, 2021 ಶುಕ್ರವಾರ ಬೆಳಗ್ಗೆ 11.30ರಿಂದ 12.30: ಕನ್ನಡ (ಬೆಂಗಳೂರಿನಲ್ಲಿ ಮಾತ್ರ)

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.