ಹುಬ್ಬಳ್ಳಿ, ಜ. 02: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಹಾಗಾಗಿ ಅದರ ಬಗ್ಗೆ ಚರ್ಚೆ ಬೇಡ ಬಿ.ಎಸ್. ಯಡಿಯೂರಪ್ಪ ಅವರು ಅವಧಿ ಮುಗಿಯುವವರೆಗೂ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಸಚಿವ ಜಗದೀಶ್ ಶೆಟ್ಟರ್, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಸಂಬಂಧ ಯಾವುದೇ ಬೆಳವಣಿಗೆ ನಡೆದಿಲ್ಲ. ಬಿ.ಎಸ್. ಯಡಿಯೂರಪ್ಪ ಅವರ ಅವಧಿ ಮುಗಿಯುವವರೆಗೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಇನ್ನೂ
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರದ ಮುಖಂಡರೊಂದಿಗೆ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಇನ್ನು ಶಿವಮೊಗ್ಗದಲ್ಲಿ ನಡೆಯಲಿರುವ ಕೋರ್ ಕಮೀಟಿಗೆ ಹಾಜರಾಗಲಿರುತ್ತೇನೆ, ಪ್ರತಿ ತಿಂಗಳು ಪಕ್ಷದ ಕಾರ್ಯಕಾರಿಣಿ ನಡೆಯುತ್ತದೆ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದವರಲ್ಲಿ ಶೇ.60ಕ್ಕಿಂತ ಹೆಚ್ಚು ಬಿಜೆಪಿ ಬೆಂಬಲಿತರಾಗಿದ್ದಾರೆ ಇದು ಸಂತಸದ ವಿಷಯ ಎಂದು ಹೇಳಿದ್ದಾರೆ.