ರಾಜ್ಯದಲ್ಲಿ ನಾಳೆಯಿಂದ 3 ದಿನ ಮಳೆ..!

ಬೆಂಗಳೂರು, . 04: ಕಳೆದ ಹಲವು ದಿನಗಳಿಂದ ವಾತಾವರಣದಲ್ಲಿ ವ್ಯತ್ಯಾಸ  ಕಂಡುಬರುತ್ತಿದ್ದು, ನಾಳೆಯಿಂದ ದಕ್ಷಿಣ ಒಳನಾಡಿನಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ. ಈಶಾನ್ಯ ಮುಂಗಾರು ಮಾರುತಗಳು ಪ್ರಬಲವಾಗಿರುವುದರಿಂದ ಮೋಡ ಕವಿದ ವಾತಾವರಣ ಕಂಡು ಬರುತ್ತಿದ್ದು, ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಈಶಾನ್ಯದ ಕಡೆಯಿಂದ ಬಲವಾದ ಮೇಲ್ಮೈ ಗಾಳಿ ಬೀಸುತ್ತಿದ್ದು, ಜ.8ರವರೆಗೂ ಇದೇ ರೀತಿ ಮೋಡ ಕವಿದ ವಾತಾವರಣ ಕಂಡು ಬರಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು. ರಾಜ್ಯದ ಕರಾವಳಿ ಭಾಗ, ಮಲೆನಾಡು ಹಾಗೂ ದಕ್ಷಿಣ ಒಣನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಯಾಗುವ ಸಂಭವವಿದೆ ಎಂದು ಹೇಳಿದರು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.

Exit mobile version