ರಾಜ್ಯಸಭಾ ಚುನಾವಣೆ : ಕಾಂಗ್ರೆಸ್‍ಗೆ ಬೆಂಬಲ ನೀಡಿದ ಒವೈಸಿಯ ಎಐಎಂಐಎಂ!

Rajyasabha

ರಾಜ್ಯಸಭಾ ಚುನಾವಣೆಯಲ್ಲಿ(Rajyasabha Election) ಕೋಮುವಾದಿ ಬಿಜೆಪಿಯನ್ನು(BJP) ಸೋಲಿಸುವ ಏಕೈಕ ಕಾರಣದಿಂದ ಎಐಎಂಐಎಂ(AIMIM Party) ಪಕ್ಷದ ಶಾಸಕರು ಕಾಂಗ್ರೆಸ್(Congress) ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ ಎಂದು ಔರಂಗಬಾದ್ ಸಂಸದ ಮತ್ತು ಎಐಎಂಐಎಂ ಪಕ್ಷದ ನಾಯಕ ಇಮ್ತಿಯಾಜ್ ಜಲೀಲ್ ಟ್ವೀಟ್ ಮೂಲಕ ಘೋಷಣೆ ಮಾಡಿದ್ದಾರೆ.


ಮಹಾರಾಷ್ಟ್ರ(Maharashtra) ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಯರ್ ಇಮ್ರಾನ್ ಅವರಿಗೆ ಮತ ನೀಡುವಂತೆ ನಮ್ಮ ಶಾಸಕರಿಗೆ ಸೂಚಿಸಿದ್ದೇವೆ. ಬಿಜೆಪಿಯನ್ನು ಸೋಲಿಸುವ ಕಾರಣದಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ. ಮಹಾ ವಿಕಾಸ ಆಘಾಡಿ ಮೈತ್ರಿಕೂಟಕ್ಕೆ ನಾವು ಬೆಂಬಲ ನೀಡಿದ್ದೇವೆ. ಆದರೆ ಈ ಬೆಂಬಲ ರಾಜ್ಯಸಭಾ ಚುನಾವಣೆಗೆ ಮಾತ್ರ ಸೀಮಿತವಾಗಿದ್ದು, ಮೈತ್ರಿಕೂಟದ ಭಾಗವಾಗಿರುವ ಶಿವಸೇನಾ ಪಕ್ಷದೊಂದಿಗಿನ ನಮ್ಮ ರಾಜಕೀಯ ಭಿನ್ನಾಭಿಪ್ರಾಯಗಳು ಮುಂದುವರೆಯಲಿವೆ ಎಂದು ಇಮ್ತಿಯಾಜ್ ತಿಳಿಸಿದ್ದಾರೆ.

ಇನ್ನು ಬೆಂಬಲ ನೀಡಲು ಕೆಲವು ಷರತ್ತುಗಳನ್ನು ನಾವು ವಿಧಿಸಿದ್ದು, ನಮ್ಮ ಶಾಸಕರು ಪ್ರತಿನಿಧಿಸುವ ಮಲೆಂಗಾವ್ ಮತ್ತು ಧುಲಿಯಾ ಕ್ಷೇತ್ರಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡಬೇಕು. ವಕ್ಪ ಮಂಡಳಿ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಮತ್ತು ಮಹಾರಾಷ್ಟ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೂಕ್ತ ಮೀಸಲಾತಿ ನೀಡಬೇಕೆಂದು ಆಗ್ರಹಿಸಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇಬ್ಬರು ಶಾಸಕರನ್ನು ಹೊಂದಿರುವ ಎಐಎಂಐಎಂ ಪಕ್ಷವೂ,

ಕೊನೆಯ ಕ್ಷಣದವರೆಗೂ ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷಕ್ಕೂ ಬೆಂಬಲ ನೀಡಿರಲಿಲ್ಲ. ಆದರೆ ಮತದಾನ ನಡೆಯುವ ಕೆಲವೇ ಗಂಟೆಗಳ ಮೊದಲು ಈ ನಿರ್ಧಾರವನ್ನು ಕೈಗೊಂಡಿದೆ.

Exit mobile version