ರಾಜ್ಯೋತ್ಸವ ಪ್ರಶಸ್ತಿ : ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ನೀಡಿ – ಸಿಎಂ ಸಿದ್ದರಾಮಯ್ಯ ಸೂಚನೆ

Bengaluru: ರಾಜ್ಯದ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ (Rajyotsava Award – Siddaramaiah) ಮಾಡುವಾಗ ಸಾಮಾಜಿಕ ನ್ಯಾಯ ಪಾಲನೆ ಮಾಡಬೇಕು. ರಾಜ್ಯದ

ಎಲ್ಲಾ ಜಾತಿ, ಧರ್ಮ, ಜನಾಂಗಗಳಿಗೂ ಪ್ರಾತಿನಿಧ್ಯ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಆಯ್ಕೆ ಸಮಿತಿಯ ಸದಸ್ಯರಿಗೆ ಸೂಚನೆ ನೀಡಿದ್ದಾರೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನ

ನೀಡಬೇಕು. ಅದೇ ರೀತಿ ಕರ್ನಾಟಕ (Karnataka) ಸಂಭ್ರಮದ ಪ್ರಯುಕ್ತ 68 ರಾಜ್ಯೋತ್ಸವ (Rajyotsava Award – Siddaramaiah) ಪ್ರಶಸ್ತಿಗಳನ್ನು ನೀಡಬೇಕೆಂದು ಅಭಿಪ್ರಾಯಪಟ್ಟರು.

ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D K Shivakumar), ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಡಾ.ಜಿ ಪರಮೇಶ್ವರ್, ಡಾ.ಹೆಚ್.ಸಿ ಮಹದೇವಪ್ಪ

(H C Mahadevappa), ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ,

ಆಯ್ಕೆ ಸಮಿತಿ ಸದಸ್ಯರಾದ ಪ್ರೊ. ಜಾಣಗೆರೆ ವೆಂಕಟರಾಮಯ್ಯ, ಡಾ.ಎಚ್.ಎಲ್ ಪುಷ್ಪ (Dr. H L Pushpa), ಡಾ.ವೀರಣ್ಣ ದಂಡೆ, ಡಾ.ಮೂಡ್ನಾಕೂಡು ಚಿನ್ನಸ್ವಾಮಿ,

ಅಲ್ಲಮಪ್ರಭು ಬೆಟ್ಟದೂರ, ಕಾ.ತ ಚಿಕ್ಕಣ್ಣ, ಪಿಂಡಿಪಾಪನಹಳ್ಳಿ ವೆಂಕಟಪ್ಪ, ಟಾಕಪ್ಪ ಕಣ್ಣೂರು, ಪಿಚ್ಚಳ್ಳಿ ಶ್ರೀನಿವಾಸ್, ಡಾ.ವಿಠಲ್ ಐ.ಬೆಣಗಿ-ಕೃಷಿ, ಡಾ. ಸಣ್ಣರಾಮು, ವೆಂಕಟರಾಮಯ್ಯ (Venkataramaiah),

ಡಾ.ಎಂ.ಎಸ್ ಮೂರ್ತಿ, ಡಾ.ಗೀತಾ ಶಿವಮೊಗ್ಗ, ಡಾ.ಜಯದೇವಿ ಜಂಗಮಶೆಟ್ಟಿ, ಐರೋಡಿ ಗೋವಿಂದಪ್ಪ, ಸಾಧುಕೋಕಿಲ (Sadhukokila), ಸುಕನ್ಯಾ ಪ್ರಭಾಕರ್ (Sukanya Prabhakar),

ಫಯಾಜ್ ಖಾನ್, ಹೃಷಿಕೇಶ್ ಬಹದ್ದೂರ್ ದೇಸಾಯಿ, ನರಸಿಂಹಲು ವಡವಾಟಿ, ಡಿ.ಎನ್ ನರಸಿಂಹರಾಜು, ಡಾ.ಪುರುಷೋತ್ತಮ ಬಿಳಿಮಲೆ, ಚನ್ನಬಸವಣ್ಣ (Channabasavanna), ಶೈಲೇಶ್

ಚಂದ್ರಗುಪ್ತ , ಜೆ.ಲೋಕೇಶ್ ಉಪಸ್ಥಿತರಿದ್ದರು.

ಇನ್ನು ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನು ಈ ವರ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಿರುವುದರಿಂದ ಪ್ರಶಸ್ತಿಗಾಗಿ ರಾಜಕೀಯವೂ ಜೋರಾಗಿದ್ದು, ಅನೇಕ ಶಾಸಕರು, ಮಂತ್ರಿಗಳ ಬೆಂಬಲಿಗರು ಪ್ರಶಸ್ತಿಯ

ಬೆನ್ನು ಹತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತೀಚಿನ ದಿನಗಳಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಲಾಭಿ ಮಾಡುವವರ ಸಂಖ್ಯೆ ಹೆಚ್ಚುತ್ತಿದ್ದು, ಅರ್ಹರಿಗೆ ಪ್ರಶಸ್ತಿ ಸಿಗುವುದೇ ಕಷ್ಟವಾಗುತ್ತಿದೆ.

ಇದನ್ನು ಓದಿ: ಯುವಕರು ಕಷ್ಟಪಟ್ಟು ಕೆಲಸ ಮಾಡಲಿ, ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಬೆಳೆಯಲಿ: ಅಲ್ವಾ? ನಾರಾಯಣ ಮೂರ್ತಿಯವರೇ? – ನಟ ಚೇತನ್ ಪ್ರಶ್ನೆ

Exit mobile version