ಯೋಗಿಯನ್ನು ಪ್ರತಿಪಕ್ಷದ ನಾಯಕನಾಗಿ ನೋಡಲು ಬಯಸುತ್ತೇನೆ – ರಾಕೇಶ್ ಟಿಕಾಯತ್.!

ಲಕ್ನೋ ಜ 27 : ಉತ್ತರ ಪ್ರದೇಶದಲ್ಲಿ ಚುನಾವಣೆ ಸಮೀಪ ಬರುತ್ತಿದ್ದಂತೆ ಆರೋಪ ಪ್ರತ್ಯಾರೋಪಗಳು ಕೇಳಿ ಬರುತ್ತಿದ್ದು, ಈ ಬಾರಿಯ ಚುನಾವಣೆ ಬಳಿಕ ಯೋಗಿಯನ್ನು ನಾನು ಪ್ರತಿಪಕ್ಷದ ಸ್ಥಾನದಲ್ಲಿ ನೋಡಲು ಬಯಸುತ್ತೇನೆ ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ರಾಕೇಶ್ ಟಿಕಾಯತ್ ಬಿಜ್ನೋರ್ ಜಿಲ್ಲೆಯ ಹಲವು ಗ್ರಾಮಗಳಿಗೆ ತೆರಳಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುವ ಅಭ್ಯರ್ಥಿಗೆ ಮತ ನೀಡುವಂತೆ ರೈತರಲ್ಲಿ ಮನವಿ ಮಾಡಿದರು. ಟಿಕ್ರಿ ಗ್ರಾಮದಲ್ಲಿ ಟಿಕಾಯತ್, ಬಿಜೆಪಿ ವಿರುದ್ಧ ಮತ ಹಾಕಿ ಹಾಗೂ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಸಿಖ್ ಸಮುದಾಯದ ರೈತರಿಗೆ ತಿಳಿಸಿದರು.


ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾವು ಯಾವುದೇ ಪಕ್ಷಕ್ಕೆ ತಮ್ಮ ಬೆಂಬಲ ನೀಡುವುದಿಲ್ಲ ಎಂದು ಕೆಲದಿನಗಳ ಹಿಂದೆ ಟಿಕಾಯತ್ ಸ್ಪಷ್ಟನೆ ನೀಡಿದ್ದರು . ಇದೇ ವೇಳೆ, ಪ್ರತಿಪಕ್ಷ ನಾಯಕನು ಬಲಶಾಲಿಯಾಗಿರಬೇಕು. ಆ ಸ್ಥಾನಕ್ಕೆ ಯೋಗಿಜಿ ಅವರಿಗಿಂತ ಸೂಕ್ತ ವ್ಯಕ್ತಿ ಇನ್ನೊಬ್ಬರಿಲ್ಲ ಎಂದು ಟಿಕಾಯತ್ ವ್ಯಂಗ್ಯವಾಡಿದರು.


ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಸಂಜಯ್ ರಾವುತ್ ನನ್ನನ್ನು ಭೇಟಿ ಮಾಡಿದ್ದು, ರೈತರ ವಿಷಯಕ್ಕೆ. ಅವರು ನನ್ನನ್ನು ಮಾಹಾರಾಷ್ಟ್ರಕ್ಕೆ ಆಹ್ವಾನಿಸಿದ್ದಾರೆ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Exit mobile version