ಪಂಚ ರಾಜ್ಯಗಳ ಚುನಾವಣೆಗೆ ಬೆಂಬಲವಿಲ್ಲ – ರಾಕೇಶ್ ಟಿಕಾಯತ್

rakesh tikait

ನವದೆಹಲಿ ಜ 19 : ಭಾರತೀಯ ಕಿಸಾನ್ ಯೂನಿಯನ್ ಸಂಸ್ಥೆಯ ನಾಯಕರಾದ ರಾಕೇಶ್ ಟಿಕಾಯತ್ ಅವರು, ನಾವು ಚುನಾವಣೆಯಲ್ಲಿ ಯಾವುದೇ ಪಕ್ಷವನ್ನೂ ಬೆಂಬಲಿಸುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಈ  ಬಗ್ಗೆ ನವದೆಹಲಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ರಾಜಕೀಯ ಪಕ್ಷಗಳಿಗೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟನೆ ನೀಡುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಬಾರಿ ನಡೆಯುವ ಪಂಚರಾಜ್ಯಗಳ ವಿಧಾನಸಭಾ ಚುನವಾಣೆಯ ಹಿನ್ನೆಲೆಯಲ್ಲಿ ಉಂಟಾಗಿರುವ ಸಾಕಷ್ಟು ಚರ್ಚೆಗಳಿಗೆ ತೆರೆ ಬಿದ್ದಂತಾಗಿದೆ.

ಕೇಂದ್ರದ ಕೃಷಿ ಕಾನೂನು ವಿರೋಧಿಸಿ ಹೋರಾಟ ನಡೆಸಿದ್ದ ಭಾರತೀಯ ಕಿಸಾನ್ ಯೂನಿಯನ್ ಪಂಚ ರಾಜ್ಯಗಳ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ ಎಂದು ಮುಖಂಡ ರಾಕೇಶ್ ಟಿಕಾಯತ್ ಸ್ಪಷ್ಟಪಡಿಸಿದ್ದಾರೆ. ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮೂರು ದಿನಗಳ ಚಿಂತನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾವು ಯಾರೊಬ್ಬರಿಗೂ ಬೆಂಬಲ ನೀಡುವುದಿಲ್ಲ ಎಂದು ಹೇಳಿದರು.

ಭಾರತೀಯ ಕಿಸಾನ್ ಪಕ್ಷದ ಅಧ್ಯಕ್ಷ ನರೇಶ್ ಟಿಕಾಯತ್ ಉತ್ತರ ಪ್ರದೇಶದಲ್ಲಿ ರಾಷ್ಟ್ರೀಯ ಲೋಕದಳ ಹಾಗೂ ಸಮಾಜವಾದಿ ಪಕ್ಷಕ್ಕೆ ಬೆಂಬಲ ನೀಡುತ್ತದೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ರಾಕೇಶ್ ಟಿಕಾಯತ್ ಈ ಸ್ಪಷ್ಟನೆ ನೀಡಿದ್ದಾರೆ. ಇನ್ನು ಸಿಸೌಲಿಯಲ್ಲಿ ಬಿಜೆಪಿಯ ಸಂಜೀವ್ ಬಲ್ಯಾನ್ ಅವರೊಂದಿಗಿನ ಸಭೆಯ ಕೆಲವು ಗಂಟೆಗಳ ನಂತರ, ಬಿಕೆಯು ಮುಖ್ಯಸ್ಥರು ತಮ್ಮ ಹೇಳಿಕೆ ಹಿಂತೆಗೆದುಕೊಂಡರು. ಇದೇ ವೇಳೆ ನಾವು ಯಾರನ್ನೂ ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮೂರು ದಿನಗಳ ರೈತರ ‘ಚಿಂತನ ಶಿಬಿರ’ದಲ್ಲಿ ರೈತರ ಜ್ವಲಂತ ಸಮಸ್ಯೆಗಳ ಕುರಿತು ರ‍್ಚೆ ನಡೆಸಲಾಗಿದೆ. ರೈತರು ಮತ್ತು ಸಂಘಟನೆಗೆ ಸಂಬಂಧಿಸಿದ ವಿಷಯಗಳನ್ನು ಮೂರು ದಿನಗಳ ಚಿಂತನ ಮಂಥನದಲ್ಲಿ ರ‍್ಚಿಸಲಾಗಿದೆ ಎಂದು ರಾಕೇಶ್ ಟಿಕಾಯತ್ ಇದೇ ವೇಳೆ ತಿಳಿಸಿದ್ದಾರೆ. ಕೇಂದ್ರ ರ‍್ಕಾರ ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ  ವ್ಯಕ್ತಪಡಿಸಿದ್ದಾರೆ.

Exit mobile version