ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿದೆ `ಚಾರ್ಲಿ- ರಕ್ಷಿತ್ ಶೆಟ್ಟಿ’ ಕಾಂಬಿನೇಷನ್!

ಅವನೇ ಶ್ರೀಮನ್ ನಾರಾಯಣ(Avane Srimannarayana) ಸಿನಿಮಾದ ಬಳಿಕ ಸಿಂಪಲ್ ಸ್ಟಾರ್(Simple Star) ರಕ್ಷಿತ್ ಶೆಟ್ಟಿ(Rakshith Shetty) ತೆರೆಯ ಮೇಲೆ ಕಾಣಿಸಿಕೊಳ್ಳದೇ ವರ್ಷವೇ ಆಯ್ತು ನೋಡಿ. ಹಾಗಾಗಿ ಅವರ ಅಭಿಮಾನಿಗಳು ರಕ್ಷಿತ್ ಯಾವಾಗ ತೆರೆ ಮೇಲೆ ಕಾಣಿಸಿಕೊಳ್ಳುತ್ತಾರೋ ಅಂತ ಚಾತಕ ಪಕ್ಷಿಯಂತೆ ಕಾಯ್ತಾ ಇದ್ದಾರೆ.

ಅಭಿಮಾನಿಗಳ ನಿರೀಕ್ಷೆಯ ಫಲವಾಗಿ, ರಕ್ಷಿತ್ ಶೆಟ್ಟಿಯವರ ಬಹುನಿರೀಕ್ಷಿತ 777 ಚಾರ್ಲಿ(Charlie 777) ಸಿನಿಮಾ ಬಿಡಗಡೆ ದಿನಾಂಕ ಸದ್ಯ ಹೊರಬಿದ್ದಿದ್ದು, ಇದೇ ಜೂನ್ 10 ರಂದು ಸಾವಿರಾರೂ ಚಿತ್ರಮಂದಿರಗಳಲ್ಲಿ 777 ಚಾರ್ಲಿ ಚಿತ್ರ ರಿಲೀಸ್ ಆಗಲಿದೆ. ಈ ಸಿಹಿ ಸುದ್ದಿಯನ್ನ ಸ್ವತಃ ರಕ್ಷಿತ್ ಶೆಟ್ಟಿ ಟ್ವೀಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ. “777 ಚಾರ್ಲಿ ಜೂನ್ 10, 2022ರಂದು ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ 5 ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ನಮ್ಮ ಸಿನಿಮಾಗೆ ನಿಮ್ಮ ಪ್ರೀತಿ, ಆಶೀರ್ವಾದ ಸದಾ ಇರಲಿ.

ರಾಮ ನವಮಿಯ ಈ ದೈವಿಕ ಸಂದರ್ಭದಲ್ಲಿ, ಧರ್ಮ ಮತ್ತು ಚಾರ್ಲಿಯ ಆಗಮನವನ್ನು ಘೋಷಿಸಲು ನಾವು ಹರ್ಷಿಸುತ್ತೇವೆ. 777 ಚಾರ್ಲಿ ಜೂನ್ 10 ರಿಂದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ” ಎಂದು ಪೋಸ್ಟ್ ಮಾಡಿದರು. ರಕ್ಷಿತ್ ಶೆಟ್ಟಿ ಅವರ ಸಿನಿಮಾಗಳು ಸದಾ ವಿಭಿನ್ನತೆಯಿಂದಲೇ ಕೂಡಿರುತ್ತವೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಅದರಂತೆ ಈ ಸಿನಿಮಾದಲ್ಲಿ ವಿಭಿನ್ನತೆ ಏನಿರಬಹುದು? ಹೇಗಿರಬಹುದು ಎಂದು ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ.

ಈಗಾಗಲೇ ಸಿನಿಮಾದ ಟೀಸರ್, ಪೋಸ್ಟರ್ ಮತ್ತು ಹಾಡುಗಳು ಭಾರೀ ನಿರೀಕ್ಷೆ ಹುಟ್ಟು ಹಾಕಿದ್ದು, ಸಿನಿಮಾ ಬಿಡುಗಡೆ ದಿನಕ್ಕೆ ಪ್ರೇಕ್ಷಕರು ಕಾಯತೊಡಗಿದ್ದಾರೆ. ಈ ಚಿತ್ರದಲ್ಲಿ ನಾಯಿಯೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ರಕ್ಷಿತ್ ಶೆಟ್ಟಿ ಜೊತೆಗೆ ಸಂಗೀತಾ ಶೃಂಗೇರಿ, ರಾಜ್ ಬಿ ಶೆಟ್ಟಿ, ದಾನಿಶ್ ಸೇಟ್ ಸೇರಿ ಹಲವರು ಅಭಿನಯಿಸಿರೋ ಈ ಚಿತ್ರವನ್ನು ಕಿರಣ್ ರಾಜ್ ನಿರ್ದೇಶಿಸಿದ್ದಾರೆ. ಈ ಸಿನಿಮಾ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಇದು ಕೂಡ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ.

ಕಳೆದ ವರ್ಷವೇ ಬಿಡುಗಡೆಯಾಗಬೇಕಿದ್ದ 777 ಚಾರ್ಲಿ ಸಿನಿಮಾ, ಕೋವಿಡ್ ಸೇರಿದಂತೆ ಹಲವು ಕಾರಣಗಳಿಂದ ಕೊನೆ ಕ್ಷಣದಲ್ಲಿ ಬಿಡುಗಡೆಯ ದಿನಾಂಕವನ್ನು ಮುಂದೂಡಿತ್ತು. ತಮ್ಮ ವಿಭಿನ್ನ ಶೈಲಿ ಹಾಗೂ ವಿಶಿಷ್ಟ ಸಂಭಾಷಣೆಯ ಮೂಲಕ ವೀಕ್ಷಕರನ್ನು ಮಂತ್ರಮುಗ್ದರನ್ನಾಗಿ ಮಾಡೋ ರಕ್ಷಿತ್ ಶೆಟ್ಟಿಯವರ 777 ಚಾರ್ಲಿ ಸಿನಿಮಾದ ಬಗ್ಗೆ ಬಹಳಷ್ಟು ನಿರೀಕ್ಷೆಗಳಿವೆ. ಹಾಗೇನೇ ಚಾರ್ಲಿ ಸಿನಿಮಾ ಯಾವ ರೀತಿ ಕಮಾಲ್ ಮಾಡಲಿದೆ ಹಾಗೂ ಚಾರ್ಲಿ ಮತ್ತು ರಕ್ಷಿತ್ ಕಾಂಬಿನೇಷನ್ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಆತುರ, ಕಾತುರದಿಂದ ಕಾಯುತ್ತಿದ್ದಾರೆ ಎಂದೇ ಹೇಳಬಹುದು.

ಒಟ್ಟಾರೆ ನಟ ರಕ್ಷಿತ್ ಶೆಟ್ಟಿ ಅವರ ಈ ಒಂದು ಪ್ರಯತ್ನಕ್ಕೆ ಅದ್ಧೂರಿ ಯಶಸ್ಸು ದೊರೆಯಲಿ ಎಂದು ಶುಭಹಾರೈಸೋಣ!

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.