Visit Channel

ಅಕ್ಟೋಬರ್ 8ಕ್ಕೆ ರಾಮನಾಥ್ ಕೋವಿಂದ್ ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಭೇಟಿ

ಚಿಕ್ಕಮಗಳೂರು ಅ 6 : ಅಕ್ಟೋಬರ್ 8ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಭೇಟಿ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳಿಂದ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಪೂರ್ವ ತಯಾರಿ ನಡೆಸುತ್ತಿದ್ದು ಈ ಒಂದು ದಿನದ ಖಾಸಗೀ ಭೇಟಿಗೆ ವ್ಯವಸ್ಥೆಯ ಹಾಗೂ ರಕ್ಷಣೆಯ ದೃಷ್ಟಿಯಿಂದ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ.

ಶೃಂಗೇರಿಯ ಗಾಂಧಿ ಮೈದಾನದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗುತ್ತಿದ್ದು, ಎಡೆಬಿಡದೆ ಕಾಮಗಾರಿ ನಡೆಯುತ್ತಿದೆ. ಇದೇ ಕಾರಣದಿಂದ ಗಾಂಧಿ ಮೈದಾನದ ವ್ಯಾಪಾರಸ್ಥರು ಸಹ ಅಂಗಡಿ ಮುಂಗಟ್ಟುಗಳನ್ನು ಖಾಲಿ ಮಾಡಿದ್ದಾರೆ. ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತವಾಗಿ ತೆರವುಗೊಳಿಸಿರುವುದಾಗಿ ವ್ಯಾಪಾರಸ್ಥರು ಹೇಳಿದ್ದಾರೆ. ಆದರೆ ಕಳೆದ ಎರಡು ವರ್ಷದಿಂದ ಕೊರೋನಾದಿಂದಾಗಿ ವ್ಯಾಪಾರ ವ್ಯವಹಾರ ಇಲ್ಲದೇ ನಷ್ಟದಲ್ಲಿದ್ದವರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.

ಭೇಟಿಯ ತಯಾರಿಯ ಪೂರ್ವಭಾವಿ ಸಭೆಯ ನಿರ್ಧಾರದಂತೆ ಹೆಲಿಪ್ಯಾಡ್ ನಿರ್ಮಾಣ ದೃಷ್ಟಿಯಿಂದ ಗಾಂಧಿ ಮೈದಾನದಲ್ಲಿ ಇರುವ ಮರಗಳನ್ನು ಕಡಿಯಲು ಅನುಮತಿಸಲಾಗಿದ್ದು, ಕಟಾವು ಕಾರ್ಯ ನಡೆಯುತ್ತಿದೆ. ಆದರೆ ಪರ್ಯಾಯವಾಗಿ ಯಾವುದೇ ಗಿಡಗಳನ್ನು ನೆಡುವ ಕಾರ್ಯ ಮಾಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.