ಬೆಂಗಳೂರು, ಮಾ. 11: ಶಾಸಕ ರಮೇಶ ಜಾರಕಿಹೊಳಿ ʻಸಿ.ಡಿʼ ಪ್ರಕರಣದ ಹಿಂದಿನ ‘ಷಡ್ಯಂತ್ರ’ ಬಯಲಿಗೆಳೆಯಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ಎಸ್‌ಐಟಿ ತಂಡ ರಚಿಸಲಾಗಿದೆ. ಸಿ.ಡಿ ಪ್ರಕರಣದ ಷಡ್ಯಂತ್ರದ ಹಿಂದಿರುವ ವ್ಯಕ್ತಿಗಳು ಯಾರು, ಅವರ ಉದ್ದೇಶಗಳೇನು ಎಂಬ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ʻತಮ್ಮ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶದಿಂದ ಹಲವರು ಸೇರಿಕೊಂಡು ಷಡ್ಯಂತ್ರ ರೂಪಿಸಿದ್ದಾರೆʼ ರಮೇಶ್ ಜಾರಕಿಹೊಳಿ ನನಗೆ ಪತ್ರ ಬರೆದು ತಿಳಿಸಿದ್ದಾರೆ.
ಸಿ.ಡಿ ಹಿಂದಿನ ಷಡ್ಯಂತ್ರ ಕುರಿತು ತನಿಖೆ ನಡೆಸಬೇಕು ಎಂದು ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದರು.