ಕಾಂಗ್ರೆಸ್(Congress) ರಾಜ್ಯಾಧ್ಯಕ್ಷ(President) ಡಿ.ಕೆ.ಶಿವಕುಮಾರ್(DK Shivkumar) ಅವರಿಗೆ ಟ್ವೀಟ್ಗಳ ಮೂಲಕ ತಿರುಗೇಟು ನೀಡಿದ್ದ ಮಾಜಿ ಕಾಂಗ್ರೆಸ್ ಸಂಸದೆ(Congress MLA) ರಮ್ಯಾ(Ramya) ಇದೀಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್(Mohamad Nalpad) ವಿರುದ್ಧ ಟ್ವೀಟ್(Tweet) ಮಾಡಿ ಕಿಡಿಕಾರಿದ್ದಾರೆ.
ಮಾಜಿ ಸಂಸದೆ ರಮ್ಯಾ ಮಾಡಿದ್ದ ಟ್ವೀಟ್ಗೆ ಪ್ರತಿಕ್ರಿಯಿಸಿದ್ದ ಮೊಹಮ್ಮದ್ ನಲಪಾಡ್, “ಇಷ್ಟು ದಿನ ರಮ್ಯಾ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ. ಈಗ ಪ್ರತ್ಯಕ್ಷರಾಗಿ ಪಕ್ಷದ ಹಿರಿಯ ನಾಯಕರ ವಿರುದ್ಧ ಮಾತನಾಡುತ್ತಾ ತಾವು ಅಸ್ತಿತ್ವದಲ್ಲಿದ್ದೇನೆ ಎಂದು ಸಾಬೀತು ಮಾಡಲು ಹೊರಟಿದ್ದಾರೆ.” ಎಂದು ವ್ಯಂಗ್ಯವಾಡಿದ್ದಾರೆ. ಮೊಹಮ್ಮದ್ ನಲಪಾಡ್ ಮಾಡಿರುವ ಟ್ವೀಟ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ರಮ್ಯಾ, ” ಈ ಹುಡುಗ ಮೊಹಮ್ಮದ್ ನಲಪಾಡ್, ಯುವ ಕಾಂಗ್ರೆಸ್ ಅಧ್ಯಕ್ಷ, ಶಾಸಕ ಹ್ಯಾರಿಸ್ ಪುತ್ರ, ಜಾಮೀನಿನ ಮೇಲೆ ಹೊರಗೆ ತಿರುಗಾಡಿಕೊಂಡಿದ್ದಾನೆ.
ಅಚ್ಚರಿ ಎಂದರೆ ಈತ ನನ್ನ ಪ್ರಾಮಾಣಿಕತೆಯನ್ನು ಪ್ರಶ್ನಿಸುತ್ತಿದ್ದಾನೆ. ವಾಹ್..! ಎಂದು ಟ್ವೀಟ್ ಮಾಡಿ, ಮೊಹಮ್ಮದ್ ನಲಪಾಡ್ ಅವರ ಮೇಲಿರುವ ಆರೋಪಗಳ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಮತ್ತು ಬಿಜೆಪಿ ಸಚಿವ ಅಶ್ವತ್ಥ್ ನಾರಾಯಣ್ ರಹಸ್ಯವಾಗಿ ಭೇಟಿ ಮಾಡಿದ್ದರು ಎಂದು ಡಿ.ಕೆ ಶಿವಕುಮಾರ್ ಆರೋಪಿಸಿದ್ದರು. ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ರಮ್ಯಾ, ಎಂ.ಬಿ.ಪಾಟೀಲ್ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ. ಕಾಂಗ್ರೆಸ್ ಪಕ್ಷ ಒಂದೇ ಘಟಕವಾಗಿ ಚುನಾವಣೆ ಎದುರಿಸಬೇಕಲ್ಲವೇ? ಎಂದು ನೇರವಾಗಿ ಡಿಕೆಶಿ ಹೇಳಿಕೆಗೆ ಚಾಟಿ ಬೀಸಿದ್ದರು.
ಎಲ್ಲ ಪಕ್ಷಗಳ ರಾಜಕೀಯ ನಾಯಕರು ಪಕ್ಷಾತೀತವಾಗಿ ಭೇಟಿಯಾಗುವುದು ಸಹಜ. ಆದರೆ ಡಿ.ಕೆ. ಶಿವಕುಮಾರ್ ಅವರು ಎಂ.ಬಿ ಪಾಟೀಲ್ ಅವರ ಬಗ್ಗೆ ನೀಡಿರುವ ಹೇಳಿಕೆ ನನಗೆ ಅಚ್ಚರಿ ಮೂಡಿಸಿದೆ ಎಂದು ಟ್ವೀಟ್ ಮಾಡಿದ್ದರು.