vijaya times advertisements
Visit Channel

ಕಡಬ ಠಾಣೆ ಪೊಲೀಸ್‌ ಪೇದೆ ವಿರುದ್ದ ಅತ್ಯಾಚಾರ ಆರೋಪ

ಮಂಗಳೂರು ಸೆ 28 : ಕಡಬ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ವಿರುದ್ದ ಅತ್ಯಾಚಾರ ಆರೋಪ  ಕೇಳಿ ಬಂದಿದ್ದು ಶಿವರಾಜ್ ಕಾಮಪುರಾಣ ಹಲವು ದಿನಗಳಿಂದ ಸಾಮಾಜಿಕ ತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ದ.ಕ ಜಿಲ್ಲೆಯ ಕಡಬ ಪೊಲೀಸ್ ಠಾಣೆಗೆ ಬಾಲಕಿ ತಂದೆಯಿಂದ ದೂರು ನೀಡಿದ್ದಾರೆ. ಅಪ್ರಾಪ್ತ ಮೇಲೆ ಅತ್ಯಾಚಾರ ಆರೋಪದಡಿ ಕಡಬ ಠಾಣೆಯ ಸಿಬ್ಬಂದಿ ಶಿವರಾಜ್ ವಿರುದ್ದ ದೂರು ನೀಡಲಾಗಿದೆ. ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿ ಗರ್ಭವತಿಯಾದ ಬಳಿಕ ಗರ್ಭಪಾತ ಮಾಡಿದ ಬಗ್ಗೆ ತಂದೆಯಿಂದ ದೂರು ನೀಡಿದ್ದಾರೆ. ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಶಿವರಾಜ್ ವಿರುದ್ದ ದೂರು ದಾಖಲಾಗಿದ್ದು,ತನಿಖೆ ನಡೆಸಲಾಗುತ್ತಿದೆ.
ಪ್ರಕರಣವೊಂದರ ಸಂಬಂಧ ಸಮನ್ಸ್ ನೀಡಲು ಆರು ತಿಂಗಳ ಹಿಂದೆ ಯುವತಿ ಮನೆಗೆ ಕಾನ್ಸ್ ಟೇಬಲ್ ಶಿವರಾಜ್ ಬಂದಿದ್ದ. ಪ್ರಕರಣ ಮುಗಿದಿದ್ದರೂ ಶಿವರಾಜ್ ಬೇರೆ ಬೇರೆ ನೆಪವೊಡ್ಡಿ ಮನೆಗೆ ಬರುತ್ತಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಜೊತೆ ಲೈಂಗಿಕ ಸಂಪರ್ಕ ಹೊಂದಿದ್ದ.ತಾನು ಗರ್ಭಿಣಿಯಾದ ಬಳಿಕ ಬಾಲಕಿ ಮನೆಯವರಿಗೆ ವಿಷಯ ತಿಳಿಸಿದ್ಲು, ಈ ವೇಳೆ ಪೊಲೀಸ್ ಸಿಬ್ಬಂದಿ ಶಿವರಾಜ್‌ನನ್ನು ಕೇಳಿದಾಗ ಗರ್ಭಪಾತ ಮಾಡಿಸಲು ದುಡ್ಡು ಕೊಡ್ತೇನೆ ಅಂತ ಹೇಳಿ ಬೆದರಿಕೆ ಹಾಕಿದ್ದ. ಸದ್ಯ ಶಿವರಾಜ್ ವಿರುದ್ದ ಕಡಬ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ ಆರೋಪಿಯನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ನಡೆಸುವುದಾಗಿ ವಿಎಚ್ ಪಿ ಎಚ್ಚರಿಕೆ ನೀಡಿದೆ.

Latest News

ಪ್ರಮುಖ ಸುದ್ದಿ

220 ಕ್ಕೂ ಅಧಿಕ ಪಿಎಫ್ಐ ಕಾರ್ಯಕರ್ತರ  ಮೇಲೆ  ಪಿಎಆರ್‌ ಕಾಯ್ದೆ ಅಸ್ತ್ರ ; ಏನಿದು ಪಿಎಆರ್?

(PAR Act on PFI workers) ಸ್ಥಿರ ಹಾಗೂ ಚರಾಸ್ತಿ ಮೌಲ್ಯವೆಷ್ಟು ಎಂಬುದನ್ನು ನಮೂದಿಸಿ, ತಾಲೂಕು ದಂಡಾಧಿಕಾರಿಗಳು, ಬಂಧಿತ ವ್ಯಕ್ತಿಯಿಂದ ಮುಚ್ಚಳಿಕೆ ಪಡೆಯುತ್ತಾರೆ.

ದೇಶ-ವಿದೇಶ

ಪಾಕಿಸ್ತಾನಕ್ಕೆ ಎಫ್-16 : ಜೈಶಂಕರ್ ಹೇಳಿಕೆಗೆ ಅಮೇರಿಕಾ  ಪ್ರತಿಕ್ರಿಯೆ

ಸದ್ಯ ಅಮೇರಿಕಾ ಪ್ರವಾಸದಲ್ಲಿರುವ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್  ಭಯೋತ್ಪಾದನೆಯ ವಿರುದ್ಧ ಹೋರಾಡಲು ಎಫ್-16 ಯುದ್ದ ವಿಮಾನಗಳನ್ನು ಪಾಕಿಸ್ತಾನಕ್ಕೆ ನೀಡಲಾಗುತ್ತಿದೆ ಎಂಬ ಅಮೇರಿಕಾದ ವಾದವನ್ನು  ತೀವ್ರವಾಗಿ ಟೀಕಿಸಿದ್ದರು.

ಲೈಫ್ ಸ್ಟೈಲ್

ಇಲ್ಲಿವೆ ನೋಡಿ ವಿಚಿತ್ರ ಸಾಕುಪ್ರಾಣಿಗಳು: ಇವುಗಳ ಬಗ್ಗೆ ಕೇಳಿದರೆ ಅಚ್ಚರಿಯಾಗುವುದು ಖಂಡಿತ!

ಸಾಕುಪ್ರಾಣಿಗಳೆಂದರೆ ತಕ್ಷಣ ನೆನಪಿಗೆ ಬರುವುದು, ನಾಯಿ, ಬೆಕ್ಕು, ಮೊಲ, ಗಿಳಿ, ಪಾರಿವಾಳಗಳು ಅಲ್ಲವೇ? ಆದರೆ, ಜಗತ್ತಿನಲ್ಲಿ ಬೇರೆ ಬೇರೆ ಕಡೆ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ತಮ್ಮ ಸಾಕುಪ್ರಾಣಿಗಳನ್ನಾಗಿ ಮಾಡಿಕೊಂಡಿದ್ದಾರೆ

Priyank
ರಾಜಕೀಯ

‘ಲಂಚ ಕೊಡಬೇಕಾಗಿಲ್ಲ’ ಅಭಿಯಾನವನ್ನು ವಿಧಾನಸೌಧದಲ್ಲೂ ಮಾಡಿ – ಪ್ರಿಯಾಂಕ್ ಖರ್ಗೆ ಆಗ್ರಹ

ಸರ್ಕಾರಕ್ಕೆ ನಿಜಕ್ಕೂ ಇಚ್ಛಾಶಕ್ತಿ ಇದ್ದಿದ್ದರೆ ತಮ್ಮ ಮೇಲಿನ ಹಗರಣ ಆರೋಪಗಳನ್ನು ನ್ಯಾಯಾಂಗ (No bribe campaign) ತನಿಖೆಗೆ ವಹಿಸುತ್ತಿದ್ದರು.