ಟಿ. ನರಸೀಪುರ ಸೆ 18 : ಕನ್ನಡ ಚಿತ್ರ ನಟ ದರ್ಶನ್ ಒಡೆತನದ ವಿನೇಶ್ ಫಾರಂ ಹೌಸ್ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ ಈ ಸಂಬಂಧ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಿಂದ ಬಂದ ಕುಟುಂಬವೊಂದು ಟಿ.ನರಸೀಪುರ ರಸ್ತೆಯಲ್ಲಿರುವ ವಿನೇಶ್ ಫಾರಂ ಹೌಸ್ನಲ್ಲಿ ಕೂಲಿ ಕೆಲಸ ಮಾಡುತ್ತಿತ್ತು. ಅದೇ ಫಾರಂ ಹೌಸ್ನಲ್ಲಿ ಕುದುರೆಗೆ ಲಾಯ ಹೊಡೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ನಜೀಮ್ ಎಂಬಾತ ಅಪ್ರಾಪ್ತೆ ಮೇಲೆ ಸೆ.13 ರಂದು ಸೋಮವಾರ ರಾತ್ರಿ ಅತ್ಯಾಚಾರ ಎಸಗಿದ್ದಾನೆ ಈ ಸಂಬಂಧ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.