20 ವರ್ಷದ ಯುವಕನಿಂದ ನಾಯಿಯ ಮೇಲೆ ಅತ್ಯಾಚಾರ

ಮುಂಬೈ, ಮಾ. 20: ದಿನ ಬೆಳಗಾದರೆ ಒಂದಲ್ಲಾ ಒಂದು ಅತ್ಯಾಚಾರದ ಪ್ರಕರಣಗಳ ಬಗ್ಗೆ ಕೇಳುತ್ತಲೇ ಇರುತ್ತೇವೆ. ಆದರೆ, ಈ ಕಾಮುಕರು ಮನುಷ್ಯರನ್ನು ಮಾತ್ರವಲ್ಲ, ಪ್ರಾಣಿಗಳನ್ನೂ ಬಿಡೋಡಿಲ್ಲ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಹೌದು, ಮಹಾರಾಷ್ಟ್ರದ ಮುಂಬೈನಲ್ಲಿ ನಾಯಿಯ ಮೇಲೆ ಯುವಕನೊಬ್ಬ ಅತ್ಯಾಚಾರ ನಡೆಸಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಣ್ಣು ನಾಯಿಯೊಂದರ ಮೇಲೆ 20 ವರ್ಷದ ಯುವಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದು, ಆತನ ವಿರುದ್ಧ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ. ಅನೈಸರ್ಗಿಕ ಲೈಂಗಿಕತೆ ನಡೆಸಿದ ಆತನ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ವರದಿ ದಾಖಲಾಗಿದೆ.

ಈ ಬಗ್ಗೆ ಪ್ರಾಣಿ ರಕ್ಷಣಾ ಟ್ರಸ್ಟ್​ ಮುಖ್ಯಸ್ಥೆ ಸವಿತಾ ಮಹಾಜನ್, ಹೆಣ್ಣು ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಯುವಕನ ವಿರುದ್ಧ ವಕೋಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಆ ಯುವಕನನ್ನು 20 ವರ್ಷದ ತೌಫೀಕ್ ಅಹಮದ್ ಎಂದು ಗುರುತಿಸಲಾಗಿದೆ. ಕಾರುಗಳ್ಳರ ಸಂಖ್ಯೆ ಹೆಚ್ಚಾಗಿದ್ದರಿಂದ ಆ ಸ್ಥಳದಲ್ಲಿ ಸಿಸಿಟಿವಿ ಅಳಡಿಸಲಾಗಿತ್ತು. ಆ ಸಿಸಿಟಿವಿಯಿಂದ ಈ ಕೃತ್ಯ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.

Exit mobile version