ಬೆಂಗಳೂರು ಜ 29 : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶಕ್ಕೆ ಸರ್ಕಾರ ತಡೆ ಹಿಡಿದಿದೆ. ಸಿಐಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ರವಿ ಡಿ. ಚನ್ನಣ್ಣನವರ್ ಸೇರಿ ಒಟ್ಟು 9 ಪೊಲೀಸ್ ಅಧಿಕಾರಿಗಳ ವಿರುದ್ಧ ಗ್ರಾನೈಟ್ ಉದ್ಯಮಿಯೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರು. ಬಳಿಕ ಏಕಾಏಕಿ ಸಿಐಡಿಯಿಂದ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಆಗಿದ್ರು, ಆದರೆ ಐಪಿಎಸ್ ಅಧಿಕಾರಿ ರವಿ. ಡಿ ಚನ್ನಣ್ಣನವರ್ ಅವರನ್ನು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ಕರ್ನಾಟಕ ಸರಕಾರ ತಡೆಹಿಡಿದಿದೆ.

9 IPS ಅಧಿಕಾರಿಗಳ ವರ್ಗಾವಣೆಯ ಆದೇಶವನ್ನು ಸರ್ಕಾರ ಹೊರಡಿಸಿತ್ತು. ರವಿ ಚನ್ನಣ್ಣನವರ್ ಅವರನ್ನು ನಿನ್ನೆಯಷ್ಟೆ ಸಿಐಡಿಯಿಂದ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು.ಇದೀಗ ಕರ್ನಾಟಕ ಸರ್ಕಾರ ಏಕಾಏಕಿ ರವಿ.ಡಿ ಚನ್ನಣ್ಣನವರ್ ಅವರ ವರ್ಗಾವಣೆ ಆದೇಶನ್ನು ತಡೆಯಿಡಿಲಾಗಿದೆ ಎಂದು ಸುತ್ತೋಲೆ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರವಿ. ಡಿ ಚನ್ನಣ್ಣನವರ್ ವರ್ಗಾವಣೆಗೆ ಸರ್ಕಾರ ತಡೆ ಹಿಡಿದಿದೆ.