Visit Channel

2 -18 ವರ್ಷದೊಳಗಿನವರಿಗೆ ನೀಡುವ ಲಸಿಕೆಯ ಕ್ಲಿನಿಕಲ್‌ ಟ್ರಯಲ್‌ ನಡೆಸಲು ತಜ್ಞರ ಸಮಿತಿ ಶಿಫಾರಸ್ಸು

covax

ನವದೆಹಲಿ, ಮೇ. 12: ಭಾರತ್‌ ಬಯೋಟೆಕ್‌ನ ‘ಕೋವ್ಯಾಕ್ಸಿನ್‌’ ಕೋವಿಡ್‌-19 ಲಸಿಕೆಯನ್ನು ಎರಡು ವರ್ಷ ವಯಸ್ಸಿನಿಂದ 18 ವರ್ಷ ವಯೋಮಾನದವರಲ್ಲಿ ಕ್ಲಿನಿಕಲ್‌ ಟ್ರಯಲ್‌ ನಡೆಸಲು ತಜ್ಞರ ಸಮಿತಿಯು ಮಂಗಳವಾರ ಶಿಫಾರಸು ಮಾಡಿದೆ.

ದೆಹಲಿಯ ಏಮ್ಸ್‌, ಪಟನಾದ ಏಮ್ಸ್‌ ಹಾಗೂ ನಾಗ್ಪುರದ ಮೆಡಿಟ್ರಿನಾ ಇನ್‌ಸ್ಟಿಟ್ಯೂಟ್‌ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್‌ ಟ್ರಯಲ್‌ ನಡೆಸಲಾಗುತ್ತಿದೆ.

‘ಮೂರನೇ ಹಂತದ ಪ್ರಯೋಗಕ್ಕೂ ಮುನ್ನ, ಎರಡನೇ ಹಂತದ ಕ್ಲಿನಿಕಲ್‌ ಟ್ರಯಲ್‌ನ ಮಧ್ಯಂತರ ಅಧ್ಯಯನ ವರದಿ (ಸುರಕ್ಷತೆಗೆ ಸಂಬಂಧಿಸಿದ ದತ್ತಾಂಶ) ಜೊತೆಗೆ ಡಿಎಸ್‌ಎಂಬಿ ಶಿಫಾರಸ್ಸುಗಳನ್ನು ಸಿಡಿಎಸ್‌ಸಿಒಗೆ ಸಲ್ಲಿಸಬೇಕು’ ಎಂದು ಕೇಂದ್ರ ಔಷಧ ಮತ್ತು ಗುಣಮಟ್ಟ ನಿಯಂತ್ರಣ ಸಂಸ್ಥೆಯ (ಸಿಡಿಎಸ್‌ಸಿಒ) ಕೋವಿಡ್‌-19 ತಜ್ಞರ ಸಮಿತಿಯು ಶಿಫಾರಸ್ಸು ಮಾಡಿರುವುದಾಗಿ ವರದಿಯಾಗಿದೆ. ಎರಡು ವರ್ಷ ವಯಸ್ಸಿನ ಮಕ್ಕಳಿಂದ 18 ವರ್ಷದ ವಯೋಮಾನದವರ ಮೇಲೆ ಕೋವ್ಯಾಕ್ಸಿನ್‌ ಲಸಿಕೆಯ ಕ್ಲಿನಿಕಲ್‌ ಟ್ರಯಲ್‌ ನಡೆಸಲು ಭಾರತ್‌ ಬಯೋಟೆಕ್‌ ಮನವಿ ಸಲ್ಲಿಸಿತ್ತು.

ಫೆಬ್ರುವರಿ 24ರಂದು ಈ ಪ್ರಸ್ತಾವನೆಯ ಬಗ್ಗೆ ಚರ್ಚಿಸಲಾಗಿತ್ತು ಹಾಗೂ ಕ್ಲಿನಿಕಲ್‌ ಟ್ರಯಲ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪರಿಷ್ಕೃತ ವಿವರ ಸಲ್ಲಿಸುವಂತೆ ತಿಳಿಸಲಾಗಿತ್ತು. ಐಸಿಎಂಆರ್‌ ಮತ್ತು ಭಾರತ್‌ ಬಯೋಟೆಕ್‌ ಸಹಯೋಗದಲ್ಲಿ ಕೋವ್ಯಾಕ್ಸಿನ್‌ ಲಸಿಕೆ ಅಭಿವೃದ್ಧಿಪಡಿಸಲಾಗಿದೆ.

Latest News

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

Medical Test
ಮಾಹಿತಿ

ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗಳನ್ನು ತಪ್ಪದೇ ಮಾಡಿಸಿಕೊಳ್ಳಿ ; ಅನುವಂಶಿಕ ಕಾಯಿಲೆಗಳನ್ನು ಪತ್ತೆ ಮಾಡಿ

ಕೆಲ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದರಿಂದ ಆನುವಂಶಿಕ ಕಾಯಿಲೆಗಳು ಪತ್ತೆ ಮಾಡಿ, ಅವುಗಳಿಗೆ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳಬಹುದು.

Siddaramaiah
ರಾಜಕೀಯ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು : ಬಿಜೆಪಿ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ(Siddaramaiah) ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

Gaalipata 2
ಮನರಂಜನೆ

ತೆರೆಯ ಮೇಲೆ ಹಾರಿದ ‘ಗಾಳಿಪಟ-2’; ಗಣಿ-ಭಟ್ರು ಕಾಂಬಿನೇಷನ್‍ಗೆ ಶಿಳ್ಳೆ-ಚಪ್ಪಾಳೆ

ಯೋಗರಾಜ್ ಭಟ್ ಮತ್ತು ‘ಗೋಲ್ಡನ್ ಸ್ಟಾರ್’ ಗಣೇಶ್ ಅವರ ಕಾಂಬಿನೇಷನ್ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕುತೂಹಲದಿಂದ ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ.