KPSCಯಿಂದ ಶೀಘ್ರದಲ್ಲೇ ಈ 9 ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ

Karnataka: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಶೀಘ್ರದಲ್ಲೇ ವಿವಿಧ ಇಲಾಖೆಯ 9 ವಿವಿಧ ಹುದ್ದೆಗಳ (Job) ನೇಮಕಾತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಿದೆ. ಕರಡು ಅಧಿಸೂಚನೆಯ ಅನುಮೋದನೆಗಾಗಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ (KPSC) ಮನವಿ ಸಲ್ಲಿಸಲಾಗಿದೆ. ಯಾವ ಇಲಾಖೆಗಳ ಯಾವ ಹುದ್ದೆಗಳಿಗೆ ಶೀಘ್ರವೇ ಅಧಿಸೂಚನೆ ಹೊರಬೀಳಲಿದೆ ಎಂಬ ವಿವರ ಇಲ್ಲಿದೆ.

• ಜಲಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್)
• ಜಲಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್)
• ಅಂತರ್ಜಲ ನಿರ್ದೇಶನಾಲಯದಲ್ಲಿನ ಭೂವಿಜ್ಞಾನಿ
• ಕಾರ್ಖಾನೆ, ಬಾಯ್ಲರ್ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು
• ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಖಾಲಿ ಇರುವ ಪತ್ರಾಂಕಿತ ವ್ಯವಸ್ಥಾಪಕರು / ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು

• ಕೃಷಿ ಇಲಾಖೆಯಲ್ಲಿನ ಸಹಾಯಕ ಕೃಷಿ ಅಧಿಕಾರಿಗಳು (ಆರ್ಪಿಸಿ)
• ಕಾರ್ಖಾನೆ, ಬಾಯ್ಲರ್ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು

ಸೂಚನೆ : ಈ ಎಲ್ಲಾ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕವೇ ಭರ್ತಿ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಈ ಕೆಳಗಿನ ಪ್ರಶ್ನೆ ಪತ್ರಿಕೆಗಳು ಇರುತ್ತವೆ.
ಕನ್ನಡ(Kannada) ಭಾಷಾ ಪರೀಕ್ಷೆ
ಪತ್ರಿಕೆ-1 (ಸಾಮಾನ್ಯ ಜ್ಞಾನ)
ಪತ್ರಿಕೆ-2 (ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್, ಕಂಪ್ಯೂಟರ್ ಜ್ಞಾನ)

Exit mobile version