Visit Channel

ಅತಿಥಿ ಉಪನ್ಯಾಸಕರ ಹುದ್ದೆ ಆಕಾಂಕ್ಷಿಗಳಿಗೆ ಸರ್ಕಾರ ಶಾಕ್ !

recruitment

ಅತಿಥಿ ಉಪನ್ಯಾಸಕರ ಹುದ್ದೆಯ ಅಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಶಾಕ್‌ ನೀಡಿದ್ದು ಇದರಿಂದಾಗಿ ಅತಿಥಿ ಉಪನ್ಯಾಸಕರಿಗೆ ಮತ್ತೆ ಹಿನ್ನಡೆ ಉಂಟಾಗಿದೆ. ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ದಾಖಲಾತಿ ಪ್ರಮಾಣದ ಪ್ರಕಾರ 18 ಸಾವಿರ ಅತಿಥಿ ಉಪನ್ಯಾಸಕರ ನೇಮಕದ ಬದಲಾಗಿ 10 ಸಾವಿರ ಮಂದಿಯನ್ನು ಮಾತ್ರ ನೇಮಕ ಮಾಡಕೊಳ್ಳುತ್ತಿದೆ ಎಂದು ಶಿಕ್ಷಣ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ.

2021-22 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಸೆಮಿಸ್ಟರ್ ಆಧಾರದಲ್ಲಿ ಬೋಧನೆ ಮಾಡಲು ಒಟ್ಟು 14,500 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡಿತ್ತು. ಆದರೆ ಈ ಬಾರಿ 18 ಸಾವಿರ ಅತಿಥಿ ಉಪನ್ಯಾಸಕರ ಕಾರ್ಯಭಾರಕ್ಕೆ ಅನುಗುಣವಾಗಿ 10 ಸಾವಿರ ಉಪನ್ಯಾಸಕರನ್ನು ಮಾತ್ರ ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ ಎನ್ನಲಾಗಿದೆ.

ರಾಜ್ಯಾದ್ಯಂತ ಕಳೆದ ವರ್ಷದಲ್ಲಿ 14,500 ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಬಾರಿ 4,500 ಮಂದಿ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. ಒಟ್ಟು 430 ಸರ್ಕಾರಿ ಹಾಗೂ 321 ಖಾಸಗಿ ಅನುದಾನಿತ ಸೇರಿ 751 ಪದವಿ ಕಾಲೇಜುಗಳಿವೆ. ನಿಯಮಾವಳಿಗಳ ಪ್ರಕಾರ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಲಭ್ಯವಿರುವ ಕಾರ್ಯಭಾರಕ್ಕೆ 18 ಸಾವಿರ ಅತಿಥಿ ಉಪನ್ಯಾಸಕರ ಅಗತ್ಯವಿದೆ.

55 ಸಾವಿರ ಅರ್ಜಿಗಳು !  ಸತತ ಎರಡು ವರ್ಷಗಳ ನಂತರ ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಕರೆ ನೀಡಿತ್ತು. ಕರ್ನಾಟಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಗೆ ಕೊನೆಯ ದಿನವಾದ (21-01-2022) ರಂದುಒಂದೇ ದಿನ 25 ಸಾವಿರಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದು, ಈ ಮೂಲಕ ಒಟ್ಟು 55 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ಮಾಹಿತಿ ನೀಡಿದ್ದಾರೆ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.