ಕುಸುಮ್‌ ಯೋಜನೆಯಡಿ ಸೌರ ಪಂಪ್‌ಸೆಟ್‌ಗಾಗಿ ರಾಜ್ಯದ 18 ಲಕ್ಷ ರೈತರು ನೋಂದಣಿ.

Bengaluru: ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆಯಿಂದ ನೀರಾವರಿ ಯೋಜನೆ ಪ್ರಯೋಜನ ಪಡೆಯಲು ಕುಸುಮ್‌ ಯೋಜನೆ (Kusum Scheme) ರೂಪಿಸಲಾಗಿದೆ. ಕುಸುಮ್ ಬಿ ಯೋಜನೆಯಡಿ, ರೈತರಿಗೆ ಸೌರ ಚಾಲಿತ ಪಂಪ್‌ಸೆಟ್‌ಗಳ ಬಳಕೆಗೆ ಒತ್ತು ನೀಡಲಾಗುತ್ತಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಕೃಷಿ ಭೂಮಿಯಲ್ಲಿ ಅಳವಡಿಸಲಾಗುವ ಸೋಲಾರ್ ಪಂಪ್‌ (Solar Pump)ಗಳನ್ನು 5 ವರ್ಷಗಳ ಕಾಲ ಪೂರೈಕೆದಾರರೇ ಉಚಿತವಾಗಿ ನಿರ್ವಹಣೆ ಕೂಡ ಮಾಡಲಿರುವ ಕಾರಣ ರೈತರ ಮೇಲೆ ಹೆಚ್ಚಿನ ಒತ್ತಡ ಉಂಟಾಗುವುದಿಲ್ಲ.

ಇನ್ನು ನೀರಾವರಿಗೆ ಹೆಚ್ಚಿನ ಮಹತ್ವ ನೀಡಬೇಕಿರುವ ಕಾರಣದಿಂದ ಸಾಂಪ್ರದಾಯಿಕ ಇಂಧನದ ಬದಲಿಗೆ ಸೌರಶಕ್ತಿ ಬಳಸುವ ಮೂಲಕ‌ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್‌ ಯೋಜನೆಯಡಿ ಸೌರ ಪಂಪ್‌ಸೆಟ್‌ ಪಡೆಯಲು ಈಗಾಗಲೇ ಕರ್ನಾಟಕ (Karnataka) ರಾಜ್ಯದ 18 ಲಕ್ಷ ರೈತರು ನೋಂದಣಿ ಮಾಡಿದ್ದಾರೆ .ಜಾಲ ಮುಕ್ತ ಸೌರ ಕೃಷಿ ಪಂಪ್‌ಸೆಟ್‌ ಅಳವಡಿಸಲು ಒತ್ತು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರದ ಸಬ್ಸಿಡಿ ಪಾಲನ್ನು ಶೇ.30ರಿಂದ 50ಕ್ಕೆ ಏರಿಸಿದೆ.ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತಾ (Gaurav Gupta) ಹೇಳಿದ್ದಾರೆ.

ಇನ್ನು ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ್ (ಕುಸುಮ್‌)  ಯೋಜನೆ ಇಂಧನ ಸಚಿವ ಕೆ.ಜೆ ಜಾರ್ಜ್‌ (K J George) ಅವರ ಮಾರ್ಗದರ್ಶನದಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಈವರೆಗೆ ರಾಜ್ಯದ 18,000 ರೈತರು ಸೌರಪಂಪ್‌ ಸೆಟ್‌ ಪಡೆಯಲು ಸೌರಮಿತ್ರ ವೆಬ್‌ಸೈಟ್‌ (Website)/ ಆ್ಯಪ್‌ನಲ್ಲಿ ನೋಂದಣಿ ಮಾಡಿದ್ದಾರೆ.ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ.

ಜತೆಗೆ, ಕುಸುಮ್‌ ಬಿ ಯೋಜನೆಯಡಿ (Kusum B Scheme) ರೈತರಿಗೆ ಸೌರ ಫಲಕಗಳು, ಸಬ್‌ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್‌ಗಳು, ಮೌಂಟಿಂಗ್‌ ಸ್ಟ್ರಕ್ಚರ್‌ (Mounting Structure), ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ. ಸೌರ ಪಂಪ್‌ಸೆಟ್‌ ಬಳಕೆಯಿಂದ 8 ಗಂಟೆಗಳ ಕಾಲ ಹಗಲಿನ ವೇಳೆಯಲ್ಲಿ ವಿದ್ಯುತ್ ಪೂರೈಕೆಯಾಗಲಿದೆ. ಇದರಿಂದ ರಾತ್ರಿ ವೇಳೆ ರೈತರು ಕೃಷಿ ಚಟುವಟಿಕೆಗಳಿಗೆ ಪರದಾಡಬೇಕಿಲ್ಲ ಎಂದು ವಿವರಿಸಿದ್ದಾರೆ.

ನೋಂದಣಿ ಮಾಡುವುದು ಸುಲಭ:
ರೈತರು ತಮ್ಮ ಆಧಾರ್, ಆರ್‌ಟಿಸಿ (Aadhar, RTC) ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್‌ಲೈನ್ ಪೋರ್ಟಲ್ https://souramitra.com ಮೂಲಕ ನೋಂದಾಯಿಸಿಕೊಳ್ಳಬಹುದು. ರೈತರ ನೋಂದಣಿ ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು, ಕಾಲ್ ಸೆಂಟರ್ ಸಂಖ್ಯೆ 080-22202100 ಕರೆ ಮಾಡಬಹುದಾಗಿದೆ.

Exit mobile version