Bengaluru: ಮಾರ್ಚ್ ತಿಂಗಳಲ್ಲಿಯೇ ಬಿಸಿಲ ಬೇಗೆಯಿಂದ ಬೆಂಗಳೂರ (Release Hemavati River Water-HDD) ನಗರ ತತ್ತರಿಸುತ್ತಿದೆ. ರಾಜ್ಯದ
ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ.ಇದೀಗ ಬೆಂಗಳೂರಿನ ನೀರಿನ ಸಮಸ್ಯೆ ಉಂಟಾಗುತ್ತಿರುವ ಮೂಲ
ಕಾರಣ ಸರ್ಕಾರ ಎಂದು ಆರೋಪಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ (H D Devegowda) ಅವರು, ಹೇಮಾವತಿ ನದಿಯ ನೀರನ್ನು ರಾಜ್ಯ
ರಾಜಧಾನಿಗೆ ಬಳಸಬೇಕು ಎಂದು (Release Hemavati River Water-HDD) ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಜೆ.ಪಿ. ಭವನದಲ್ಲಿ (J P Bhavan) ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನೀರಿನ ಅಭಾವ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ.
ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ”ನೀರಿನ ಟ್ಯಾಂಕರ್‌ಗಳ ಬೆಲೆ ಗಗನಕ್ಕೇರುತ್ತಿದೆ. ಸರ್ಕಾರಕ್ಕೆ ಕಾವೇರಿ ನೀರು ಕೊಡಲು ಸಾಧ್ಯವಾಗದಿದ್ದರೆ ಹೇಮಾವತಿ
ನದಿಯಿಂದಾದರೂ ನೀರು ತಂದು ಬೆಂಗಳೂರಿಗೆ ಬಿಡಲಿ. ಅವರೂ ನನ್ನ ಜನರೇ ಆಗಿದ್ದು, ಹಾಸನ, ತುಮಕೂರು (Hassan, Tumakuru) ಮೊದಲಾದ
ಗ್ರಾಮಗಳಿಗೆ ಹೇಮಾವತಿ ನೀರು ಪೂರೈಸಲಿ ಎಂದು ಹೇಳಿದ್ದಾರೆ.
ಇದೇ ವೇಳೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒ (CEO) ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಕರೆದು ಮಾತನಾಡಿರುವ ಮುಖ್ಯಮಂತ್ರಿಗಳನ್ನು
ತರಾಟೆಗೆ ತೆಗೆದುಕೊಂಡ ಅವರು, ಕಳೆದ ಹತ್ತು ತಿಂಗಳಲ್ಲಿ ಅವರು ಎಷ್ಟು ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದಾರ? ಬರ ಪರಿಸ್ಥಿತಿ ನಿರ್ವಹಣೆಯಲ್ಲಿ
ವೈಫಲ್ಯವನ್ನು ತೋರಿಸಿದ್ದಾರೆ. ಇದು ನಾಚಿಕೆಯಿಲ್ಲದ ಸರ್ಕಾರ. ಸರಿಯಾದ ಪ್ಲಾನಿಂಗ್ ಇಲ್ಲ. ಗ್ಯಾರಂಟಿ (Guarantee) ಯೋಜನೆಗಳ ನೀಡಿದರೆ ಸಾಲದು
ಅದಕ್ಕೆ ತಕ್ಕಹಾಗೆ ಅಭಿವೃದ್ಧಿ ಕಾರ್ಯಗಳ ಕೈಗೊಳ್ಳಬೇಕು ಎಂದು ನುಡಿದಿದ್ದಾರೆ.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಕಾವೇರಿ ನೀರಿಗಾಗಿ ಹೋರಾಟ ನಡೆಸಿ ಹೇಮಾವತಿ, ಕಬಿನಿ, ಹಾರಂಗಿ (Hemavathi, Kabini, Harangi)
ಅಣೆಕಟ್ಟು ಕಟ್ಟಿಸಿದವನು ನಿಮ್ಮ ಮುಂದೆ ಕೂತಿದ್ದೇನೆ. ಹೇಮಾವತಿಯಲ್ಲಿ ನೀರಿದೆ. ಅಲ್ಲಿನ ಹಳ್ಳಿಗಳಿಗೂ ಆ ನೀರು ಕೊಡಿ, ಬೆಂಗಳೂರಿಗೂ ನೀರು ಬಿಡಿ. ಕೆ.ಆರ್.ಎಸ್‌ನ
ಲ್ಲಿ 90 ಅಡಿಗೆ ಬಂದಿದೆ. ಹೇಮಾವತಿಯಲ್ಲಿ 23 ಟಿಎಂಸಿ (TMC) ನೀರಿದೆ. ಜನರಿಗೆ ಕೊಡಲು ನಿಮಗೆ ಸಮಸ್ಯೆ ಏನು? ಜನರು ನೀರಿಗಾಗಿ ಕಣ್ಣೀರು ಹಾಕುತ್ತಿದ್ದಾರೆ
ಎಂದು ಕಳವಳ ವ್ಯಕ್ತಪಡಿಸಿದರು.ಇದೇ ವೇಳೆ, ನರೇಂದ್ರ ಮೋದಿ (Narendra Modi) ಪ್ರಧಾನಿಯಾಗಿ ಪುನರಾಯ್ಕೆಯಾದರೆ ಕಾವೇರಿ ವಿವಾದ ಸೇರಿದಂತೆ
ಕರ್ನಾಟಕಕ್ಕೆ ಸಂಬಂಧಿಸಿದ ಹಲವಾರು ಬಾಕಿ ಇರುವ ಸಮಸ್ಯೆಗಳನ್ನು ಪರಿಹಾರಗೊಳ್ಳುವ ವಿಶ್ವಾಸವನ್ನು ದೇವೇಗೌಡ ಅವರು ವ್ಯಕ್ತಪಡಿಸಿದ್ದಾರೆ.