ಪೊಲೀಸ್ ಅಧಿಕಾರಿಯ ಕಾಲರ್ ಹಿಡಿದ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ!

ತೆಲಂಗಾಣದಲ್ಲಿ(Telangana) ಗುರುವಾರ ಕಾಂಗ್ರೆಸ್ ನಾಯಕಿ(Congress Leader) ರೇಣುಕಾ ಚೌಧರಿ(Renuka Chowdhari) ಅವರು ರಾಹುಲ್ ಗಾಂಧಿಗೆ(Rahul Gandhi) ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ಸಮನ್ಸ್(Summons) ವಿರುದ್ಧ ಪಕ್ಷದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರ ಕಾಲರ್ ಹಿಡಿದಿರುವುದನ್ನು ಪ್ರದರ್ಶಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ(Social Media) ಭಾರಿ ವೈರಲ್(Viral) ಆಗುತ್ತಿದೆ.

ಈ ವೀಡಿಯೊಗೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ವಿಡಿಯೋವನ್ನು ಸುದ್ದಿ ಸಂಸ್ಥೆ ಎಎನ್‌ಐ(ANI) ಟ್ವಿಟರ್‌ನಲ್ಲಿ(Tweeter) ಪೋಸ್ಟ್ ಮಾಡಿದೆ. ಇದು 46,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಕೂಡ ಪಡೆದುಕೊಂಡಿದೆ. 43 ಸೆಕೆಂಡ್‌ಗಳ ವಿಡಿಯೋದಲ್ಲಿ ಎಂ.ಎಸ್ ಚೌಧರಿ(MS Chowdhari) ಅವರು ಪೊಲೀಸರೊಂದಿಗೆ ವಾಗ್ವಾದ ಮಾಡಿರುವುದನ್ನು ಬಹಿರಂಗಪಡಿಸಿದೆ. ನಂತರ ಆಕೆಯನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ಪೊಲೀಸ್ ವ್ಯಾನ್ ಕಡೆಗೆ ಎಳೆದೊಯ್ದಿದ್ದಾರೆ.

ರಾಹುಲ್ ಗಾಂಧಿ ಅವರನ್ನು ಇಡಿ ಪ್ರಶ್ನಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ನೀಡಿದ “ಚಲೋ ರಾಜಭವನ”(Chalo Rajabhavana) ಕರೆಯ ಭಾಗವಾಗಿ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ನ್ಯಾಷನಲ್ ಹೆರಾಲ್ಡ್(National Herald Case), ಮನಿ ಲಾಂಡರಿ ಡೀಲ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆ ನಡೆಸುತ್ತಿದೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ ಮತ್ತು ಪಕ್ಷದ ಸಂಸದ ಎ ರೇವಂತ್ ರೆಡ್ಡಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ಹಲವರನ್ನು ಪೊಲೀಸರು ರಾಜಭವನದತ್ತ ಸಾಗುತ್ತಿದ್ದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಪ್ರತಿಭಟನೆಯಿಂದಾಗಿ ಖೈರ್ತಾಬಾದ್ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ ಮತ್ತು ಕೆಲವು ಪ್ರತಿಭಟನಾಕಾರರು ಸರ್ಕಾರಿ ಬಸ್ ಮೇಲೆ ಹತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಹಾಗೂ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ

Exit mobile version