ನವದೆಹಲಿ: 73 ನೇ ಗಣರಾಜ್ಯೋತ್ಸವಕ್ಕೆ ರಾಷ್ಟ್ರ ರಾಜಧಾನಿ ಸಂಪೂರ್ಣ ಸಜ್ಜಾಗಿದ್ದು ಇದಕ್ಕಾಗಿ ಕೇಂದ್ರ ಸರ್ಕಾರವು ಡಿಡಿ ದೂರದರ್ಶನದಲ್ಲಿ ಈ ಬಾರಿಯ ಗಣರಾಜ್ಯೋತ್ಸವದ ನೇರಪ್ರಸಾರ ಮಾಡಲು ಸರ್ವ ರೀತಿಯ ಸಿದ್ಧತೆ ಮಾಡಿಕೊಂಡಿದೆ. ರಾಜಪಥ್‌ನಲ್ಲಿ ನಡೆಯುವ ಆಕರ್ಷಕ ಪರೇಡ್ ಸೆರೆಹಿಡಿಯಲು, 59 ಕ್ಯಾಮೆರಾಗಳನ್ನು ಮತ್ತು 160 ಸಿಬ್ಬಂದಿಯನ್ನು ಸರ್ಕಾರ ನಿಯೋಜಿಸಿದ.
ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ಭವನದಿಂದ ರಾಜಪಥ್‌ವರೆಗೆ ಅಂದು ನಡೆಯುವ ಎಲ್ಲಾ ಕಾರ್ಯಕ್ರಮಗಳ ನೇರ ಪ್ರಸಾರಕ್ಕಾಗಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ರಾಜಪಥದ ಇಕ್ಕೆಲಗಳಲ್ಲಿ 33 ಕ್ಯಾಮೆರಾಗಳನ್ನು ನಿಯೋಜಿಸಲಾಗಿದೆ. ರಾಷ್ಟ್ರೀಯ ಯುದ್ಧ ಸ್ಮಾರಕ, ಇಂಡಿಯಾ ಗೇಟ್ ಹಾಗೂ ರಾಷ್ಟ್ರೀಯ ಕ್ರೀಡಾಂಗಣದಲ್ಲಿ 16 ಹಾಗೂ ರಾಷ್ಟ್ರಪತಿ ಭವನದಲ್ಲಿ 10 ಕ್ಯಾಮೆರಾಗಳನ್ನು ಇರಿಸಲಾಗಿದೆ ಜೊತೆಗೆ 15 ವರ್ಷದ ಒಳಗಿನ ಲಸಿಕೆ ಪಡೆಯದ ಮಕ್ಕಳಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ದೇಹಲಿ ಪೊಲೀಸ್ ತಿಳಿಸಿದೆ.
ಬೆಂಗಳೂರಿನಲ್ಲಿ ಸಾರ್ವಜನಿಕರಿಗಿಲ್ಲ ಪ್ರವೇಶ :
ಕೋವಿಡ್ 19 ಹಿನ್ನೆಲೆಯಲ್ಲಿ(Coronavirus) ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ(manekshaw parade ground) ಜ.26ರಂದು ಸರಳವಾಗಿ 73ನೇ ಗಣರಾಜ್ಯೋತ್ಸವ(Republic Day) ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮಗಳನ್ನು ವೀಕ್ಷಿಸಲು ಕೇವಲ 200 ಗಣ್ಯರಿಗೆ ಮಾತ್ರ ಆಸನಗಳನ್ನು ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಆಹ್ವಾನಿತರು ಕಡ್ಡಾಯವಾಗಿ ಮುಖಗವುಸು ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಹೇಳಿದರು.
ಕೆಎಸ್‌ಆರ್‌ಪಿ, ಸಿಆರ್‌ಪಿಎಫ್, ಬಿಎಸ್‌ಎಫ್, ಸಿಎಆರ್, ಕೆಎಸ್‌ಐಎಸ್‌ಎಫ್, ಸಂಚಾರಿ ಪೊಲೀಸರು, ಮಹಿಳಾ ಪೊಲೀಸರು, ಗೃಹ ರಕ್ಷಕ ದಳ, ಟ್ರಾಫಿಕ್ ವಾರ್ಡನ್, ಅಗ್ನಿಶಾಮಕ ದಳದ ಸಿಬ್ಬಂದಿ, ಶ್ವಾನ ದಳ ಮತ್ತು ಬ್ಯಾಂಡ್‌ನ ಒಟ್ಟು 21 ತುಕಡಿಗಳಲ್ಲಿ ಸುಮಾರು 500 ಮಂದಿ ಕವಾಯತ್ತಿನಲ್ಲಿ ಭಾಗವಹಿಸಲಿದ್ದಾರೆ