Syria: ಕಳೆದ ಕೆಲ ದಿನಗಳಿಂದ ಸಿರಿಯಾದಲ್ಲಿ (Syria) ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಅಸ್ಸಾದ್ ಸರ್ಕಾರ ಪತನಗೊಂಡಿದೆ (The Assad government has fallen) , ಅಧ್ಯಕ್ಷ ಬೇರೆ ದೇಶಕ್ಕೆ ಪಲಾಯನ ಮಾಡಿದ್ದಾರೆ. ಬಂಡುಕೋರರು ರಾಜಧಾನಿ ಡಮಾಸ್ಕಸ್ (The rebel capital is Damascus) ಸೇರಿದಂತೆ ಬಹುತೇಕ ಎಲ್ಲಾ ಪ್ರದೇಶಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲಿಯ ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿರುವ ಭಾರತವು 75 ಭಾರತೀಯರನ್ನು ಇದೀಗ ಸುರಕ್ಷಿತವಾಗಿ ಲೆಬನಾನ್ಗೆ ಸ್ಥಳಾಂತರ ಮಾಡಿದ್ದು, ಶೀಘ್ರವೇ ಭಾರತಕ್ಕೆ ಕರೆತರಲಿದೆ (It will be brought to India soon) ಎನ್ನುವ ಮಾಹಿತಿ ಲಭ್ಯವಾಗಿದೆ. ಸಿರಿಯಾದಿಂದ ಸ್ಥಳಾಂತರಿಸಲ್ಪಟ್ಟವರಲ್ಲಿ ಜಮ್ಮು ಮತ್ತು ಕಾಶ್ಮೀರದ 44 ಯಾತ್ರಾರ್ಥಿಗಳೂ ಸೇರಿದ್ದಾರೆ.

ಈಗಾಗಲೇ ದಂಗೆಯ ನಂತರದ ಸೂಕ್ಷ್ಮ ಪರಿಸ್ಥಿತಿಯನ್ನು (Sensitive situation) ಗಮನದಲ್ಲಿಟ್ಟುಕೊಂಡು, ಭಾರತ ಸರ್ಕಾರವು ಇನ್ನೂ ಸಿರಿಯಾದಲ್ಲಿ ವಾಸಿಸುವ ಭಾರತೀಯ ನಾಗರಿಕರಿಗೆ ಎಚ್ಚರಿಕೆ ವಹಿಸಲು ಸಲಹೆ ನೀಡಿದೆ. ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಮಾರ್ಗಸೂಚಿಗಳ ಬಗ್ಗೆಯೂ ಗಮನ ಹರಿಸುವಂತೆ ಮನವಿ ಮಾಡಲಾಗಿದೆ.ವಿದೇಶದಲ್ಲಿ ಸಿಲುಕಿರುವ ಭಾರತೀಯರ ಸುರಕ್ಷತೆ ಮತ್ತು ಭದ್ರತೆಯು (Safety and security of Indians) ಭಾರತ ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. ಈ ಹಿನ್ನೆಲೆ ಸಿರಿಯಾದಲ್ಲಿ ಸಿಲುಕಿರುವ ಭಾರತೀಯರು ಡಮಾಸ್ಕ್ಸ್ನಲ್ಲಿರುವ ಭಾರತೀಯ ರಾಯಭಾರಿ (Indian Ambassador) ಕಚೇರಿ ಸಂಪರ್ಕಿಸುವಂತೆ ಸಲಹೆ ನೀಡಲಾಗಿದೆ. ಸಿರಿಯಾದಲ್ಲಿನ ಪರಿಸ್ಥಿತಿ ಕುರಿತು ಭಾರತ ಕುರಿತು ಸೂಕ್ಷ್ಮ ಮೇಲ್ವಿಚಾರಣೆ ನಡೆಸಲಿದೆ ಎಂದಿದೆ.
ಸಿರಿಯಾದಲ್ಲಿ ಸಿಲುಕಿರುವ ಭಾರತೀಯರು ಡಮಾಸ್ಕಸ್‌ನಲ್ಲಿರುವ ತುರ್ತು ಸಹಾಯವಾಣಿ +963 993385973ಗೆ ವಾಟ್ಸಾಪ್ ಮತ್ತು hoc.damascus@mea.gov.in ಇಮೇಲ್ ಮೂಲಕ ಸಂಪರ್ಕಿಸುವಂತೆ ಸಲಹೆ ನೀಡಿದೆ.
ಸಿರಿಯಾ ಬಂಡುಕೋರರು (Syria rebels) ಭಾನುವಾರ ಅಲ್ಲಿನ ರಾಜಧಾನಿ ಡಮಾಸ್ಕಸ್ ಸೇರಿದಂತೆ ಹಲವು ಪ್ರಮುಖ ನಗರವನ್ನು ವಶಕ್ಕೆ ಪಡೆಯುವ ಮೂಲಕ ಸರ್ವಾಧಿಕಾರ ಸರ್ಕಾರವನ್ನು ಕೆಳಗಿಳಿಸಿದರು. ಹಯಾತ್ ತಹ್ರೀರ್ ಅಲ್-ಶಾಮ್ ಡಮಾಸ್ಕಸ್ ಅನ್ನು ವಶಕ್ಕೆ ಪಡೆಯುತ್ತಿದ್ದಂತೆ ಅಸ್ಸಾದ್ ದೇಶ ತೊರೆದು ಓಡಿ ಹೋಗಿದ್ದಾನೆ. ಅಸ್ಸಾದ್ನ 50 ವರ್ಷದ ಕುಟುಂಬ ಆಳ್ವಿಕೆಯನ್ನು ಕೊನೆಗೊಳಿಸಲಾಗಿದೆ (The reign has ended) . ಪಲಾಯನ ಮಾಡಿರುವ ಅಸ್ಸಾದ್ಗೆ ಮಾಸ್ಕೋದಲ್ಲಿದ್ದು ಅವರಿಗೆ ಆಶ್ರಯ ನೀಡಲಾಗುವುದು ಎಂದು ರಷ್ಯಾದ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.