Visit Channel

ಪ್ರತಿಷ್ಠೆ ಬದಿಗಿಟ್ಟು ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಿ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

BL21STATESSIDDARAMAIAH

ಬೆಂಗಳೂರು, ಏ. 08: ರಾಜ್ಯ ಬಿಜೆಪಿ ಸರ್ಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕೆಎಸ್‌ಆರ್‌ಟಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕೆಎಸ್‌ಆರ್‌ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟ ಸ್ವಯಂಕೃತ ಅಪರಾಧ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಕಿಡಿಕಾರಿದ್ದಾರೆ.

ಅಲ್ಲದೇ, ಕಾರ್ಮಿಕ‌ ಸಂಘದ ನಾಯಕರ ಜೊತೆ ಕೂತು ಅವರ ಮ‌ನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಾದ ರಾಜ್ಯ ಸರ್ಕಾರ ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ‌‌ ಸಂಘರ್ಷಕ್ಕೆ ದಾರಿಮಾಡಿಕೊಡುತ್ತಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ ಬಾರಿ ಕೆಎಸ್‌ಆರ್‌ಟಿಸಿ‌ ನೌಕರರ‌ ಮುಷ್ಕರದ ಸಂದರ್ಭದಲ್ಲಿ ಅವರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ ಬಿಜೆಪಿ ಸರ್ಕಾರ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ಆ‌ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ರೋಗದಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ಕೆಎಸ್‌ಆರ್‌ಟಿಸಿ‌ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ-ನಷ್ಟಕ್ಕೀಡಾಗುತ್ತಿರುವುದಕ್ಕೆ ರಾಜ್ಯದ ಅಸಮರ್ಥ-ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ ಎಂದಿರುವ ಅವರು, ಆಂತರಿಕ ತಿಕ್ಕಾಟ,‌ ಅಸಾಮರ್ಥ್ಯ ಮತ್ತು ಭ್ರಷ್ಟಾಚಾರಗಳಿಂದಾಗಿ ಹಾದಿತಪ್ಪಿರುವ ರಾಜ್ಯದ ಬಿಜೆಪಿ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ. ಇದರ ವಿರುದ್ಧ ಸ್ಪಷ್ಟ ಸಂದೇಶವನ್ನು ಉಪಚುನಾವಣೆಯಲ್ಲಿ‌ ಮತದಾರರು ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.