- ಪ್ರವಾಸೋದ್ಯಮ ಹೆಸರಿನಲ್ಲಿ ನಿಯಮ (resorts locked for violating rules) ಮೀರಿ ವ್ಯವಹಾರಕ್ಕೆ ಬ್ರೇಕ್
- ಗಂಗಾವತಿಯಲ್ಲಿ ಕೃಷಿಭೂಮಿಯಲ್ಲಿ ವಾಣಿಜ್ಯ ಚಟುವಟಿಕೆ ಮಾಡುತ್ತಿದ್ದ 98 ರೆಸಾರ್ಟ್‌ಗಳು ಅನಧಿಕೃತ
- ಕೊಪ್ಪಳ ಜಿಲ್ಲೆಯಲ್ಲಿ 138ಕ್ಕೂ ಹೆಚ್ಚು ರೆಸಾರ್ಟ್‌ಗಳ ಪರಿಶೀಲನೆ – ಕಠಿಣ ಎಚ್ಚರಿಕೆ
Koppala: ಕೊಪ್ಪಳ ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ (resorts locked for violating rules) ರೆಸಾರ್ಟ್‌ಗಳ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ.
ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ (Suresh Itnal) ಅವರ ಖಡಕ್ ಆದೇಶದ ಬೆನ್ನಲ್ಲೇ ಅಧಿಕಾರಿಗಳು ಗಂಗಾವತಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಅಚ್ಚರಿ ದಾಳಿ ನಡೆಸಿದರು.

ಬಸಾಪುರ, ಆನೆಗೊಂದಿ, ಸಣಾಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೆಸಾರ್ಟ್‌ಗಳನ್ನು ಪರಿಶೀಲಿಸಿದ ಅಧಿಕಾರಿಗಳು ನಿಯಮ ಉಲ್ಲಂಘನೆ
ಪತ್ತೆಹಚ್ಚಿ ತಕ್ಷಣವೇ ಕ್ರಮ ಕೈಗೊಂಡರು. ಒಟ್ಟು 138ಕ್ಕೂ ಹೆಚ್ಚು ರೆಸಾರ್ಟ್‌ಗಳ ಮೇಲೆ ದಾಳಿ ನಡೆದಿದ್ದು, ಅವುಗಳಲ್ಲಿ ಹಲವಾರು ಅನಧಿಕೃತವಾಗಿರುವುದು ಬೆಳಕಿಗೆ ಬಂದಿದೆ.
ದಾಳಿಯಲ್ಲಿ ಜೆಸ್ಕಾಂ, ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಅಬಕಾರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಪರಿಶೀಲನೆ ವೇಳೆ ಕೆಲವು ರೆಸಾರ್ಟ್‌ಗಳು ಯಾವುದೇ ಕಾನೂನುಬದ್ಧ ಅನುಮತಿ ಪಡೆಯದೆ (resorts locked for violating rules) ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ. ಕೃಷಿ ಭೂಮಿಯನ್ನು ವಾಣಿಜ್ಯ ಬಳಕೆಗೆ ಪರಿವರ್ತನೆ ಮಾಡದೇ ರೆಸಾರ್ಟ್ ನಡೆಸಲಾಗುತ್ತಿದ್ದ ಪ್ರಕರಣಗಳೂ ಪತ್ತೆಯಾಗಿವೆ.
ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿರುವುದರಿಂದ ತಕ್ಷಣವೇ ಆ ರೆಸಾರ್ಟ್‌ಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಬಸಾಪುರ ಭಾಗದಲ್ಲಿ ಸುಮಾರು 150ಕ್ಕೂ ಹೆಚ್ಚು ರೆಸಾರ್ಟ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ 98ಕ್ಕೂ ಹೆಚ್ಚು ರೆಸಾರ್ಟ್‌ಗಳು ಅನಧಿಕೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅದೇ ರೀತಿ ಗಂಗಾವತಿ ತಾಲೂಕಿನ ಆನೆಗೊಂದಿ ಭಾಗದಲ್ಲಿ ಇರುವ 50 ರೆಸಾರ್ಟ್‌ಗಳ ಪೈಕಿ 40 ರೆಸಾರ್ಟ್‌ಗಳು ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವುದು ಪತ್ತೆಯಾಗಿದೆ.
ಜಿಲ್ಲಾಧಿಕಾರಿ ಆದೇಶದಂತೆ ಈ ಎಲ್ಲಾ ರೆಸಾರ್ಟ್‌ಗಳಿಗೆ ಬೀಗ ಜಡಿದು, ಮುಂದಿನ ತನಿಖೆಗಾಗಿ ನೋಟಿಸ್ ಜಾರಿಗೊಳಿಸಲಾಗಿದೆ.
ದಾಳಿಯ ವೇಳೆ ಜೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ ಮೀಟರ್‌ಗಳನ್ನು ತೆರವುಗೊಳಿಸಿದರು. ಪಂಚಾಯಿತಿ ಸಿಬ್ಬಂದಿ ನೀರಿನ ಸಂಪರ್ಕವನ್ನು ಸ್ಥಗಿತಗೊಳಿಸಿದರು. ಕಂದಾಯ ಇಲಾಖೆ ಅಧಿಕಾರಿಗಳು ಕಾನೂನುಬಾಹಿರವಾಗಿ ನಿರ್ಮಿಸಲಾದ ಕಟ್ಟಡಗಳಿಗೆ ಬೀಗ ಹಾಕಿದರು.
ತಹಶೀಲ್ದಾರ್ ವಿಶ್ವನಾಥ ಮುರಡಿ (Vishwanath Muradi) ಹಾಗೂ ತಾಲೂಕು ಪಂಚಾಯಿತಿ ಇಒ ರಾಮರೆಡ್ಡಿ ಪಾಟೀಲ್ (Ram Reddy Patil) ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಆನೆಗೊಂದಿ, ಸಣಾಪುರ, ಮಲ್ಲಾಪುರ, ಸಂಗಾಪುರ ಸೇರಿದಂತೆ ಹಲವು ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ರಮ ಜಾರಿಗೊಂಡಿದೆ.
ಜಿಲ್ಲಾಡಳಿತದ ಈ ಕ್ರಮ ಸ್ಥಳೀಯವಾಗಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪ್ರವಾಸೋದ್ಯಮ ಬೆಳವಣಿಗೆ ಹೆಸರಿನಲ್ಲಿ ನಿಯಮ ಉಲ್ಲಂಘನೆ ಮಾಡುವವರಿಗೆ ಇದು ಸ್ಪಷ್ಟ ಸಂದೇಶವಾಗಿದೆ.
ಮುಂದಿನ ದಿನಗಳಲ್ಲಿ ಅನಧಿಕೃತ ಕಟ್ಟಡಗಳು ಹಾಗೂ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು
ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಕಾನೂನುಬದ್ಧ ಅನುಮತಿ ಪಡೆದು ಮಾತ್ರ ವ್ಯವಹಾರ ನಡೆಸಬೇಕು ಎಂಬುದನ್ನು ಈ ದಾಳಿ ಒತ್ತಿ ಹೇಳಿದೆ.
ಇದನ್ನು ಓದಿ : https://vijayatimes.com/high-court-warns-against-passport-verification/