• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಜ್ಯದಲ್ಲಿ H1N1 ಪ್ರಕರಣಗಳ ಏರಿಕೆ: ಆರೋಗ್ಯ ಇಲಾಖೆ ಹೈ ಅಲರ್ಟ್

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ರಾಜ್ಯದಲ್ಲಿ H1N1 ಪ್ರಕರಣಗಳ ಏರಿಕೆ: ಆರೋಗ್ಯ ಇಲಾಖೆ ಹೈ ಅಲರ್ಟ್
0
SHARES
14
VIEWS
Share on FacebookShare on Twitter

ರಾಜ್ಯದಲ್ಲಿ H1N1 ಪ್ರಕರಣಗಳ (Rise in H1N1 cases in karnataka) ಸಂಖ್ಯೆ ಹೆಚ್ಚಳ

ಒಟ್ಟೂ 4,125 H1N1 ಕೇಸ್ ದಾಖಲು

ಆರೋಗ್ಯ ಇಲಾಖೆಯಿಂದ ಹೊಸ ಗೈಡ್​ಲೈನ್ಸ್​ ಪ್ರಕಟ

Bengaluru: ರಾಜ್ಯದಲ್ಲಿ H1N1 (ಹಂದಿಜ್ವರ) ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ (Rise in H1N1 cases in karnataka) ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದೆ.

ಈ ವರ್ಷದ ಮೊದಲ 8 ತಿಂಗಳಲ್ಲಿ ಕರ್ನಾಟಕದ 32 ಜಿಲ್ಲೆಗಳಲ್ಲಿ ಒಟ್ಟು 4,212 ಪ್ರಯೋಗಾಲಯ ದೃಢೀಕೃತ H1N1 ಪ್ರಕರಣಗಳು ವರದಿಯಾಗಿವೆ.

ಬೆಂಗಳೂರು ಸೇರಿದಂತೆ 15 ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದು ಆರೋಗ್ಯ ಇಲಾಖೆಯ ಗಮನ ಸೆಳೆದಿದೆ.

Rise in H1N1 cases in karnataka

ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ತಕ್ಷಣ ಸ್ಪಂದಿಸಲು ಆರೋಗ್ಯ ವ್ಯವಸ್ಥೆಯನ್ನು ಸಜ್ಜುಗೊಳಿಸಲಾಗಿದೆ.

ರಾಜ್ಯದಲ್ಲಿ ಸಾಮಾನ್ಯವಾಗಿ ಜನವರಿಯಿಂದ ಮಾರ್ಚ್ ಹಾಗೂ ಜುಲೈನಿಂದ ಸೆಪ್ಟೆಂಬರ್‌ವರೆಗೆ ಇನ್‌ಫ್ಲುಯೆಂಜಾ (Influenza) ಪ್ರಕರಣಗಳು ಹೆಚ್ಚಾಗುವ ಪ್ರವೃತ್ತಿ ಇರುವುದರಿಂದ ಪ್ರಸಕ್ತ ಅವಧಿಯಲ್ಲಿ ವಿಶೇಷ ನಿಗಾ ವಹಿಸಲಾಗಿದೆ.

ಆರೋಗ್ಯ ಸಚಿವ ಯು.ಟಿ. ಖಾದರ್ (U.T. Khader) ಅಧ್ಯಕ್ಷತೆಯಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಿರಿಯ (Rise in H1N1 cases in karnataka) ಆರೋಗ್ಯ

ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಲಾಗಿದ್ದು, ಸೋಂಕಿನ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಲಾಗಿದೆ.

ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ 2025ರಲ್ಲಿ ರಾಜ್ಯದಲ್ಲಿ 4,583 H1N1 ಪ್ರಕರಣಗಳು ಹಾಗೂ 2024ರಲ್ಲಿ 3,903 ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದ ಪ್ರಕರಣಗಳ ಮೇಲೂ ನಿರಂತರ ನಿಗಾ ಇಡಲಾಗುತ್ತಿದೆ.

ಜಿಲ್ಲಾ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಹಾಗೂ ಸೂಪರ್-ಸ್ಪೆಷಾಲಿಟಿ (Super-Specialty) ಆಸ್ಪತ್ರೆಗಳನ್ನು ಇನ್‌ಫ್ಲುಯೆಂಜಾ ಲಕ್ಷಣಗಳಿರುವ ಜ್ವರ (ILI)

ಮತ್ತು ತೀವ್ರ ಉಸಿರಾಟದ ಸೋಂಕು (SARI) ಪ್ರಕರಣಗಳನ್ನು ಗುರುತಿಸುವ ಪ್ರಮುಖ ಕಣ್ಗಾವಲು ಕೇಂದ್ರಗಳನ್ನಾಗಿ ಮಾಡಲಾಗಿದೆ.

ಶಂಕಿತ ಪ್ರಕರಣಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಲು ಆರೋಗ್ಯ ಸಿಬ್ಬಂದಿಗೆ ಅಗತ್ಯ ತರಬೇತಿಯನ್ನೂ ನೀಡಲಾಗಿದೆ.

ಸೋಂಕು ಪತ್ತೆ ಮತ್ತು ತ್ವರಿತ ಪರೀಕ್ಷೆಗೆ ಅಗತ್ಯವಿರುವ ಪ್ರಯೋಗಾಲಯ ವ್ಯವಸ್ಥೆಯನ್ನೂ ಬಲಪಡಿಸಲಾಗಿದೆ. ICMR-NCDC ಪ್ರಯೋಗಾಲಯಗಳು, ರಾಜ್ಯದ ವೈರಲ್

ರೋಗನಿರ್ಣಯ ಪ್ರಯೋಗಾಲಯಗಳು (VRDL) ಹಾಗೂ ನಿಮ್ಹಾನ್ಸ್ ಮೂಲಕ ಮಾದರಿಗಳ ಪರೀಕ್ಷೆಗೆ ಅಗತ್ಯವಿರುವ ಕಿಟ್‌ಗಳು ಮತ್ತು ಉಪಕರಣಗಳನ್ನು ಸಿದ್ಧವಾಗಿರಿಸಲಾಗಿದೆ.

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಹಿಡಿದು ಜಿಲ್ಲಾಸ್ಪತ್ರೆಗಳವರೆಗೆ ಒಸೆಲ್ಟಾಮಿವಿರ್ ಔಷಧಿ, N95 ಮಾಸ್ಕ್‌ಗಳು ಹಾಗೂ PPE ಕಿಟ್‌ಗಳನ್ನು ಅಗತ್ಯ ಪ್ರಮಾಣದಲ್ಲಿ

ದಾಸ್ತಾನು ಮಾಡಲಾಗಿದೆ. ಇದರಿಂದ ಸೋಂಕು ದೃಢಪಟ್ಟ ಅಥವಾ ತೀವ್ರ ಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ವಿಳಂಬವಿಲ್ಲದೆ ಚಿಕಿತ್ಸೆ ನೀಡಲು ಸಾಧ್ಯವಾಗಲಿದೆ.

ಆಸ್ಪತ್ರೆಗಳಲ್ಲಿ ಅಗತ್ಯ ಬೆಡ್‌ಗಳು ಹಾಗೂ ಮೂಲಸೌಕರ್ಯಗಳನ್ನು ಸಿದ್ಧವಾಗಿಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಜನರು ಕೂಡ ಸೋಂಕಿನ ಹರಡುವಿಕೆ ತಡೆಯಲು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಜ್ವರ, ಕೆಮ್ಮು, ನೆಗಡಿ, ಗಂಟಲು ನೋವು ಅಥವಾ

ಉಸಿರಾಟದ ತೊಂದರೆ ಸೇರಿದಂತೆ ಸೋಂಕಿನ ಲಕ್ಷಣಗಳು ಕಂಡುಬಂದರೆ ಇತರರಿಂದ ಅಂತರ ಕಾಯ್ದುಕೊಂಡು ಮನೆಯಲ್ಲೇ ಪ್ರತ್ಯೇಕವಾಗಿರುವುದು ಸೂಕ್ತ.

ಸಾರ್ವಜನಿಕ ಸ್ಥಳಗಳಲ್ಲಿ ಅಗತ್ಯವಿದ್ದಲ್ಲಿ ಮಾಸ್ಕ್ ಧರಿಸುವುದು, ಸೋಪು ಅಥವಾ ಸ್ಯಾನಿಟೈಸರ್‌ನಿಂದ (Sanitizer) ಆಗಾಗ್ಗೆ ಕೈಗಳನ್ನು ಸ್ವಚ್ಛಗೊಳಿಸುವುದು ಹಾಗೂ ಕಣ್ಣು,

ಮೂಗು ಮತ್ತು ಬಾಯಿಯನ್ನು ಪದೇಪದೇ ಕೈಯಿಂದ ಮುಟ್ಟುವುದನ್ನು ತಪ್ಪಿಸುವುದು ಮುಖ್ಯ. ಸೀನುವಾಗ ಅಥವಾ ಕೆಮ್ಮುವಾಗ ಟಿಶ್ಯೂ ಅಥವಾ ಕರವಸ್ತ್ರ ಬಳಸಬೇಕು.

ಜ್ವರ ಅಥವಾ ಶೀತದ ಲಕ್ಷಣಗಳಿರುವಾಗ ಇತರರೊಂದಿಗೆ ನಿಕಟ ಸಂಪರ್ಕ ಹಾಗೂ ಹಸ್ತಲಾಘವವನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ. ವೈದ್ಯರ ಸಲಹೆಯಿಲ್ಲದೆ ಸ್ವಯಂ ಔಷಧ ಸೇವಿಸದಂತೆ ಆರೋಗ್ಯ ಇಲಾಖೆ ಎಚ್ಚರಿಸಿದೆ.

ಇದೇ ವೇಳೆ ಬೆಂಗಳೂರಿನ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ H1N1 ಸೋಂಕು ಹರಡಿದೆ ಎಂಬ ವದಂತಿಗಳನ್ನು ಆರೋಗ್ಯ ಇಲಾಖೆ ತಳ್ಳಿಹಾಕಿದೆ.

ಶಾಲೆಯ ಇಬ್ಬರು ಶಿಕ್ಷಕರಲ್ಲಿ ಮಾತ್ರ ಲಕ್ಷಣಗಳು ಕಂಡುಬಂದಿದ್ದು, ಯಾವುದೇ ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಹೀಗಾಗಿ ಪೋಷಕರು ಅನಗತ್ಯವಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ. ಸೋಂಕು ಹರಡುವುದನ್ನು ತಡೆಯಲು ಶಾಲಾ ಆವರಣಗಳಲ್ಲಿ ಸ್ವಚ್ಛತೆ,

ವೈಯಕ್ತಿಕ ನೈರ್ಮಲ್ಯ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಶಾಲಾ ಆಡಳಿತ ಮಂಡಳಿಗಳಿಗೆ ಮಾರ್ಗಸೂಚಿ ನೀಡಲಾಗಿದೆ.

ರಾಜ್ಯದಲ್ಲಿ H1N1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಭಯಪಡುವ ಬದಲು ಮುನ್ನೆಚ್ಚರಿಕೆ ವಹಿಸಿ, ಲಕ್ಷಣಗಳು ಕಂಡುಬಂದ ತಕ್ಷಣ ವೈದ್ಯಕೀಯ ಸಲಹೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ.

ಇದನ್ನು ಓದಿ : https://vijayatimes.com/phana-verify-medicines/

Tags: bengaluruh1n1healthdepartmenthighalertvirus

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.