ಬ್ರಿಟನ್‌ ಹಣಕಾಸು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುಧಾಮೂರ್ತಿ ಅಳಿಯ ರಿಷಿ ಸುನಾಕ್

ಲಂಡನ್ :  ಮಹತ್ವದ ಬೆಳವಣಿಗೆಯಲ್ಲಿ ಬ್ರಿಟನ್ ಸರ್ಕಾರದಲ್ಲಿ(Britan Government) ಹಣಕಾಸು ಸಚಿವರಾಗಿ(Finance Minister)  ಸೇವೆ ಸಲ್ಲಿಸುತ್ತಿದ್ದ ಇನ್ಫೋಸಿಸ್‌ ಸುಧಾಮೂರ್ತಿ(Infosys Sudhamurthy) ಅಳಿಯ ರಿಷಿ ಸುನಾಕ್(Rishi Sunaak)  ತಮ್ಮ ಸ್ಥಾನಕ್ಕೆ ರಾಜೀನಾಮೆ(Resign) ನೀಡಿದ್ದಾರೆ. ಈ ಕುರಿತು ಅವರ ತಮ್ಮ ಟ್ವೀಟರ್‌(Tweeter) ಖಾತೆಯಲ್ಲಿ ರಾಜೀನಾಮೆ ಪತ್ರವನ್ನು ಪೋಸ್ಟ್‌ ಮಾಡಿ, ತಮ್ಮ ರಾಜೀನಾಮೆಯನ್ನು ಸ್ಪಷ್ಟಪಡಿಸಿದ್ದಾರೆ.

ರಿಷಿ ಸುನಾಕ್‌ ಮತ್ತು ಬ್ರಿಟನ್‌ ಸರ್ಕಾರದಲ್ಲಿ ಆರೋಗ್ಯ ಕಾರ್ಯದರ್ಶಿಯಾಗಿದ್ದ  ಸಜ್ಜಿದ್ ಜಾವೇದ್ ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಇಬ್ಬರು ಕೂಡಾ ಬೋರಿಸ್‌ ಜಾನ್ಸನ್‌ ಸರ್ಕಾರದಲ್ಲಿ ಅತ್ಯಂತ ಮಹತ್ವದ ಹುದ್ದೆಗಳನ್ನು ನಿಭಾಯಿಸುತ್ತಿದ್ದರು. ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರೊಂದಿಗಿನ ರಾಜಕೀಯ  ಭಿನ್ನಾಭಿಪ್ರಾಯಗಳಿಂದ ಇವರಿಬ್ಬರೂ ತಮ್ಮ ಸ್ಥಾನಗಳನ್ನು ತೊರೆದು  ಸರ್ಕಾರದಿಂದ ಹೊರಬಂದಿದ್ದಾರೆ ಎನ್ನಲಾಗಿದೆ.

ಇನ್ನು ತಮ್ಮ ರಾಜೀನಾಮೆ ಕುರಿತು ಟ್ವೀಟರ್‌ಬರೆದುಕೊಂಡಿರುವ ರಿಷಿ ಸುನಾಕ್‌,  ನನ್ನ ಹುದ್ದೆಗೆ ರಾಜೀನಾಮೆ ನೀಡಿ, ನಾನು ಹೋರಾಡಲು ಸಿದ್ದನಾಗಿದ್ದೇನೆ. ನಾನು ಸರಿಯಾದ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ನಾನು ಭಾವಿಸುತ್ತೇನೆ. ಸರ್ಕಾರವನ್ನು ಸಮರ್ಥವಾಗಿ ನಡೆಸಬೇಕೆಂದು ಸಾರ್ವಜನಿಕರ ನಿರೀಕ್ಷೆ ಆಗಿರುತ್ತದೆ. ಅದು ಸಾಧ್ಯವಾಗದಿದ್ದಾಗ ಹೋರಾಟ ಅನಿವಾರ್ಯವಾಗುತ್ತದೆ. ಇದು ನನ್ನ ಕೊನೆಯ ಮಂತ್ರಿ ಹುದ್ದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಇನ್ನು ಸಂಸದ ಕ್ರಿಸ್ ಪಿಂಚರ್ ವಿರುದ್ಧ ಡೌನಿಂಗ್ ಸ್ಟ್ರೀಟ್‍ನ ಆರೋಪಗಳ ನಿರ್ವಹಣೆಯ ನಂತರ  ಪ್ರಧಾನಿ ಬೋರಿಸ್‌ ಜಾನ್ಸನ್‌ಮತ್ತು ಅನೇಕ ಸಚಿವರ ನಡುವೆ ರಾಜಕೀಯ ಭಿನ್ನಾಭಿಪ್ರಾಯ  ಮೂಡಿತ್ತು. ಹೀಗಾಗಿ ಹಣಕಾಸು ಸಚಿವ ಸ್ಥಾನಕ್ಕೆ ರಿಷಿ ಸುನಾಕ್‌ ಮತ್ತು ಆರೋಗ್ಯ ಕಾರ್ಯದರ್ಶಿ ಸ್ಥಾನಕ್ಕೆ ಸಜ್ಜಿದ್ ಜಾವೇದ್ ರಾಜೀನಾಮೆ ನೀಡಿ ಸರ್ಕಾರದಿಂದ ಹೊರ ನಡೆದಿದ್ದಾರೆ.

Latest News

ಪ್ರಮುಖ ಸುದ್ದಿ

ತಾಜುದ್ದೀನ್ಜುನೈದೀ ಮತ್ತು  ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ

ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.