ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ: 13 ಜನ ಸಾವು.

Haveri: ರಾಜ್ಯದಲ್ಲಿ ರಸ್ತೆ ಅಪಘಾತ ಪ್ರಕರಣ ಮುಂದುವರಿದ್ದು. ದೇವರ ದರ್ಶನಕ್ಕೆಂದು ಹೊಸ ವಾಹನದಲ್ಲಿ ತೆರಳಿದ್ದ ಮಂದಿ ದೇವರ ಪಾದ ಸೇರಿದ್ದಾರೆ.ಇಂದು ಶುಕ್ರವಾರ ನಸುಕಿನ ಜಾವ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ (Bengaluru-Pune) ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಮಂದಿ ಮೃತಪಟ್ಟಿದ್ದಾರೆ.

Road Accident

ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾದ ಪರಿಣಾಮ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ.ಶಿವಮೊಗ್ಗ ಮೂಲದಪರಶುರಾಮ್ ​​(45), ಭಾಗ್ಯ (40), ನಾಗೇಶ (50), ವಿಶಾಲಾಕ್ಷಿ (40), ಅರ್ಪಿತಾ (Arpita) (18), ಸುಭದ್ರಾ ಬಾಯಿ (65), ಪುಣ್ಯ (50), ಮಂಜುಳಾಬಾಯಿ, ಚಾಲಕ ಆದರ್ಶ್ (23), ಮಾನಸ (24), ರೂಪಾ (40), ಮಂಜುಳಾ (50) ಮೃತಪಟ್ಟವರು. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ (Emmehatti) ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.

ನಾಗೇಶ್​ ಮತ್ತು ವಿಶಾಲಕ್ಷಿ (Nagesh And Vishalakshi) ದಂಪತಿ ಪುತ್ರ ಆದರ್ಶ್ ಹೊಸ ಟಿಟಿ ವಾಹನ ಖರೀದಿಸಿದ್ದರು. ಹೊಸ ಟಿಟಿ ವಾಹನಕ್ಕೆ ಪೂಜೆ ಮಾಡಿಸಲು ಹೋಗಿದ್ದ ಕುಟುಂಬದವರು ಸೋಮವಾರ (ಜೂ. 24) ರಂದು ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಶಿವಮೊಗ್ಗದಿಂದ ಹೊರಟು, ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ದೇವಸ್ಥಾನ ತಲುಪಿದ್ದಾರೆ. ಅಲ್ಲಿ ವಾಹನ ಪೂಜೆ ಮಾಡಿಸಿ, ಬಳಿಕ ತುಳಜಾಭವಾನಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ನಂತರ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಸ್ಥಾನಕ್ಕೆ (Chincholi Mayamma Temple) ಹೋಗಿದ್ದಾರೆ.

ಅಲ್ಲಿಂದ ಬೆಳಗಾವಿ ಜಿಲ್ಲೆ ಸವದತ್ತಿಗೆ ಆಗಮಿಸಿ, ಇಲ್ಲಿಯ ರೇಣುಕಾ ಯಲ್ಲಮ್ಮನ (Renuka Yellamma) ದರ್ಶನ ಪಡೆದು ಮರಳಿ ಊರಿಗೆ ಬರುವಾಗ ಅಪಘಾತ ಸಂಭವಿಸಿದೆ. ಇನ್ನುಳಿದ ನಾಲ್ವರು ಗಾಯಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅತೀ ವೇಗದಿಂದ ಬಂದ ಟಿಟಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮುಕ್ಕಾಲು ಭಾಗ ಟಿಟಿ ಲಾರಿ ಅಡಿಯಲ್ಲಿ ಹೋಗಿ ಜಖಂ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Exit mobile version