Visit Channel

ಚಿತ್ರರಂಗದ ಕಾರ್ಮಿಕರಿಗೆ ರಾಕಿಂಗ್ ಸ್ಟಾರ್ ನೆರವು: ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಗೆ ತಲಾ 5 ಸಾವಿರ ರೂ. ನೀಡಲಿರುವ ನಟ ಯಶ್

WhatsApp Image 2021-06-01 at 10.34.49 PM (1)

ಬೆಂಗಳೂರು, ಜೂ. 02: ಕೊರೊನಾ‌ ಹೊಡೆತಕ್ಕೆ ಸಿಲುಕಿರುವ ಕನ್ನಡ ಚಿತ್ರರಂಗದ ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿರುವ ರಾಕಿಂಗ್ ಸ್ಟಾರ್ ಯಶ್, ಚಿತ್ರೋದ್ಯಮವನ್ನೇ ನಂಬಿ ಜೀವನ ನಡೆಸುತ್ತಿರುವ ಮೂರು ಸಾವಿರ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಲಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಅವರು, ಕಣ್ಣಿಗೆ ಕಾಣದ ವೈರಸ್ ಮನುಷ್ಯನ ಜೀವನವನ್ನೇ ಬುಡಮೇಲು ಮಾಡಿದೆ. ಅದರಲ್ಲೂ ಕಳೆದ ಒಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈಕಟ್ಟಿ ಕುಳಿತಿದೆ. ಹೀಗಾಗಿ ಇದು ಬರೀ ಮಾತನಾಡುವ ಸಮಯವಲ್ಲ, ಬದಲಿಗೆ ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆಗೆ ನಿಲ್ಲುವ ಸಮಯವಾಗಿದೆ.

ಹೀಗಾಗಿ ಸಿನಿಮಾ ರಂಗದ 3 ಸಾವಿರಕ್ಕೂ ಹೆಚ್ಚು ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರ ಖಾತೆಗೆ ತಲಾ 5 ಸಾವಿರ ರೂ. ನೀಡಲು ನಿರ್ಧರಿಸಿದ್ದೇನೆ ಎಂದು ಮಾಹಿತಿ ನೀಡಿರುವ ರಾಕಿಂಗ್ ಸ್ಟಾರ್, ಈ ಕುರಿತು ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ.ಗೋವಿಂದ್ ಮತ್ತು ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ್ ಅವರ ಜೊತೆಗೆ ಚರ್ಚೆ ಮಾಡಿರುವುದಾಗಿ ತಿಳಿಸಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.