ಮೈಸೂರು, ಜೂ. 10: ಮೈಸೂರು ಸುತ್ತಮುತ್ತ ನಡೆದಿರುವ ಭೂ ಹಗರಣ ವಿಚಾರದ ತನಿಖೆಗೆ ರೋಹಿಣಿ ಸಿಂಧೂರಿಯನ್ನು ವಿಶೇಷಧಿಕಾರಿಯಾಗಿ ನೇಮಿಸಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮನವಿ ಮಾಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಶಿಲ್ಪಾನಾಗ್ ಹೆಗಲ ಮೇಲೆ ಬಂದೂಕು ಇಟ್ಟು ರೋಹಿಣಿ ಸಿಂಧೂರಿಗೆ ಶೂಟ್ ಮಾಡಿದ್ದಾರೆ. ಹಾಸನದಿಂದ ಇಲ್ಲಿ ಬಂದು ಪ್ರೆಸ್‌ಮೀಟ್ ಮಾಡುತ್ತಾರೆ ಏನಾಗಿದೆ ಮೈಸೂರಿಗೆ? ಎಂದು ಪ್ರಶ್ನಿಸಿದ್ದಾರೆ.
ರಾಜಕಾಲುವೆ ಮೇಲೆ ಕಲ್ಯಾಣ ಮಂಟಪ ನಿರ್ಮಾಣ ಆಗಿದೆ. ಒಂದು ಗುಂಟೆ ಅಲ್ಲ ಸಾವಿರಾರು ಎಕರೆ ಹೋಗಿದೆ. ಎಲ್ಲಾ ಜನಪ್ರತಿನಿಧಿಗಳು ಒಟ್ಟಾಗಿ ಸೇರಿ ಕೊರೊನಾ ಓಡಿಸುವ ಬದಲು ಅಧಿಕಾರಿ ಓಡಿಸಿದರು. ರೋಹಿಣಿ ಸಿಂಧೂರಿ ಶಿಲ್ಪಾನಾಗ್ ಒಳ್ಳೆಯ ಅಧಿಕಾರಿಗಳು. ಇಬ್ಬರು ಐಎಎಸ್ ಅಧಿಕಾರಿಗಳನ್ನು ಹೊರ ಹಾಕಿದ್ದು ರಾಜಕಾರಣಿಗಳ ಸ್ವಾರ್ಥ ಎಂದು ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಹರಿಹಾಯ್ದರು.
ಮೈಸೂರು ಸುತ್ತ ಮುತ್ತ ಭೂ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಬೆಂಗಳೂರಿನಲ್ಲಿ ಸಿಎಂ ಸಿಎಸ್ ಭೇಟಿ ಮಾಡುತ್ತೇನೆ. ಈ ವೇಳೆ ರೋಹಿಣಿ ಸಿಂಧೂರಿಯನ್ನು ವಿಶೇಷಧಿಕಾರಿಯಾಗಿ ನೇಮಿಸಲು ಮನವಿ ಮಾಡುತ್ತೇನೆ. ಅಲ್ಲದೇ ಚಾಮುಂಡಿಬೆಟ್ಟದ ಸುತ್ತ ಮುತ್ತ ಸಹ ಒತ್ತುವರಿಯಾಗಿದೆ. ಹೀಗಾಗಿ 6 ತಿಂಗಳ ಕಾಲ ಅವರನ್ನು ನೇಮಿಸಲು ಒತ್ತಾಯ ಮಾಡುತ್ತೇನೆ.
ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭೂ ಅಕ್ರಮದ ವಿಚಾರ. ಇದನ್ನು ತುರ್ತಾಗಿ ಜಾರಿಗೊಳಿಸುವಂತೆ ನಾನು ಮನವಿ ಮಾಡುತ್ತಿದ್ದು, ನಾಲ್ಕು ಆದೇಶಗಳನ್ನು ಹಿಂದಿನ ಆದೇಶ ಮಾಡಿದ್ದಾರೆ. ಅದರ ಪ್ರತಿಗಳನ್ನು ಮನವಿ ಪತ್ರದ ಜೊತೆ ಸಲ್ಲಿಸಿದ ವಿಶ್ವನಾಥ್, ನಾಲ್ಕು ಪ್ರಕರಣಗಳು ಮಾತ್ರವಲ್ಲ ಇಂತಹ ಹಲವು ಪ್ರಕರಣಗಳಿವೆ, ಸುಪ್ರೀಂಕೋರ್ಟ್ ಆದೇಶ ಇದೆ.
ಬಫರ್ ಜೋನ್ ಬಗ್ಗೆ ಇಲ್ಲಿ ಯಾವುದೇ ಮನೆ ಕೈಗಾರಿಕೆ ಬರುವಂತಿಲ್ಲ. ಇಲ್ಲಿ ಬಪರ್ ಜೋನ್‌ನಲ್ಲಿ ಅಕ್ರಮ ನಡೆಸಲಾಗುತ್ತಿದೆ. ಇದರ ಬಗ್ಗೆ ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದು ಮನವಿ ಮಾಡಿದರು.