- ಮಂಗಳೂರು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ, ನಿಷೇಧಾಜ್ಞೆ ಜಾರಿ
- ಕರಾವಳಿ ಕರ್ನಾಟಕದಲ್ಲಿ ಮತ್ತೆ ಭುಗಿಲೆದ್ದ ಕೋಮು ಹಿಂಸಾಚಾರ (Rowdysheeter Suhas Shetty case)
- ಖಾಸಗಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧ
Mangalore: ರೌಡಿಶೀಟರ್ ಸುಹಾಸ್ ಹ* ಪ್ರಕರಣ ಬೆನ್ನಲ್ಲೇ ಮಂಗಳೂರು ನಗರದ (Mangalore city) ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಸೆಕ್ಷನ್ 163 ಜಾರಿಗೊಳಿಸಲಾಗಿದೆ (163 implemented) .
ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಆದೇಶ ಹೊರಡಿಸಿದ್ದಾರೆ.ಆದೇಶದಲ್ಲಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ (Indian Judicial Security Code Section) : 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ದಿನಾಂಕ 2025ರ ಮೇ 2 ಬೆಳಗ್ಗೆ 6 ಗಂಟೆಯಿಂದ ಮೇ 6ರ ಸಂಜೆ 6ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಬಜಪೆಯ ಸುಹಾಸ್ ಶೆಟ್ಟಿ (Bajpai’s Suhas Shetty) ವಿರುದ್ಧ ಎರಡು ಕೊ* ಪ್ರಕರಣಗಳೂ ಸೇರಿದಂತೆ ಐದು ಪ್ರಕರಣಗಳು (Five cases) ದಾಖಲಾಗಿದ್ದವು. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹ*ಯಾದ ಬೆನ್ನಲ್ಲೇ ಸುರತ್ಕಲ್‌ನಲ್ಲಿ 2022ರ ಜುಲೈ 28ರಂದು ನಡೆದಿದ್ದ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್ ಫಾಝಿಲ್ (Muhammad Fazil) ಹ* ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ. ಕಳೆದ ವರ್ಷ ಜಾಮೀನಿನ ಮೇಲೆ (Bail) ಹೊರಗೆ ಬಂದಿದ್ದ ಎಂದು ತಿಳಿದುಬಂದಿದೆ.

ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ (Prajwal, Anvit, Latish) ಹಾಗೂ ಶಶಾಂಕ್ (Shashank) ಜೊತೆ ತೆರಳುತ್ತಿದ್ದಾಗ ಐದಾರು ಮಂದಿ ದುಷ್ಕರ್ಮಿಗಳ ತಂಡ ಸ್ವಿಫ್ಟ್ ಕಾರು ಹಾಗೂ ಪಿಕಪ್ ವಾಹನದಲ್ಲಿ ಹಿಂಬಾಲಿಸಿತ್ತು.ಬಜಪೆ ಠಾಣೆ ವ್ಯಾಪ್ತಿಯ ಕಿನ್ನಿಪದವಿನಲ್ಲಿ ರಾತ್ರಿ 8.27ಕ್ಕೆ ಕಾರನ್ನು ಏಕಾಏಕಿ ಅಡ್ಡಗಟ್ಟಿ ಸುಹಾಸ್ ಶೆಟ್ಟಿ ಮೇಲೆ ಹ* ನಡೆಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಎ.ಜೆ.ಆಸ್ಪತ್ರೆಗೆ (A.J. to hospital) ಕರೆತರಲಾಗಿತ್ತು.
ಆದರೆ, ಅಷ್ಟರಲ್ಲೇ ಆತ ಕೊನೆಯುಸಿರೆಳೆದಿದ್ದ ಎಂದು ವರದಿಗಳು ತಿಳಿಸಿವೆ.ಇನ್ನು ಈ ಘಟನೆಯಲ್ಲಿ ಸುಹಾಸ್ ಶೆಟ್ಟಿಯ ಸಹಚರನೊಬ್ಬ ಗಾಯಗೊಂಡಿದ್ದು, ಆತ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಜಪೆ ಠಾಣೆಯಲ್ಲಿ ಕೊ* ಪ್ರಕರಣ ದಾಖಲಾಗಿದೆ. ಎಸಿಪಿ (ACP) ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada district) ಖಾಸಗಿ ಬಸ್ ಸಂಚಾರ ಬಂದ್ ಆಗಿದೆ. ಬಸ್ ಓಡಿಸಿದರೆ ನಮಗೂ ತೊಂದರೆಯಾಗಬಹುದು. ಈಗಾಗಲೇ ಬಸ್ಗಳಿಗೆ ಕಲ್ಲು ತೂರಾಟ ಮಾಡಿದ್ದಾರೆ. ಇವತ್ತು ಇಡೀ ದಿನ ಬಸ್ ಬಂದ್ ಇರುತ್ತದೆ (Bus bandh) ಎಂದು ಖಾಸಗಿ ಬಸ್ ಚಾಲಕರು ತಿಳಿಸಿದ್ದಾರೆ.
ಇದನ್ನು ಓದಿ : http://ವಿರಾಟ್, ಕೃನಾಲ್ ಜುಗಲ್ಬಂದಿಗೆ ಡೆಲ್ಲಿ ಕಂಗಾಲ್: 6 ವಿಕೆಟ್ಗಳ ಗೆಲುವು – ನಂ.1 ಪಟ್ಟಕ್ಕೇರಿದ RCB
ಬಸ್ ಸಂಚಾರವಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.ಸದ್ಯ ಕೆಎಸ್ಆರ್ಟಿಸಿ ಬಸ್ (KSRTC bus) ಸಂಚಾರ ನಡೆಯುತ್ತಿದೆ. ಮತ್ತೊಂದೆಡೆ, (Rowdysheeter Suhas Shetty case) ಅಂಗಡಿ ಮುಂಗಟ್ಟುಗಳು (Storefronts) ಸಹ ಬಂದ್ ಆಗಿವೆ. ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಆಗಿದೆ.