Visit Channel

ಲಸಿಕೆ ಖರೀದಿಗೆ ಕಾಂಗ್ರೆಸ್ ನಿಂದ 100 ಕೋಟಿ ರೂ.: ಸಿದ್ದರಾಮಯ್ಯ ಘೋಷಣೆ

siddaramaiah-011618825201

ಬೆಂಗಳೂರು, ಮೇ. 14: ಕೊರೊನಾ ಲಸಿಕೆ ಖರೀದಿಸಲು ಕಾಂಗ್ರೆಸ್ ಶಾಸಕರು ಹಾಗೂ ಸಂಸದರು ತಮ್ಮ ಕ್ಷೇತ್ರದ ಅಭಿವೃದ್ಧಿ ನಿಧಿಯಿಂದ ತಲಾ 1 ಕೋಟಿ ರೂ.ನಂತೆ 100 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿ ನಿಧಿಗೆ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ 2 ಕೋಟಿ ರೂ., ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಗೆ ತಲಾ 5 ಕೋಟಿ ರೂ. ನೀಡಲಾಗುತ್ತಿದೆ. ಇದರಲ್ಲಿ ಒಂದು ಕೋಟಿ ರೂ.ವನ್ನು ಕಾಂಗ್ರೆಸ್ ಶಾಸಕರು, ಸಂಸದರು ದೇಣಿಗೆಯಾಗಿ ರಾಜ್ಯ ಸರಕಾರಕ್ಕೆ ನೀಡಲು ತೀರ್ಮಾನಿಸಲಾಗಿದೆ ಎಂದರು.

ರಾಜ್ಯದ ಪ್ರತಿಯೊಬ್ಬರಿಗೆ ಕೊರೊನಾ ಲಸಿಕೆ ದೊರೆಯುವಂತಾಗಬೇಕು ಎಂಬುದು ನಮ್ಮ ಬಯಕೆ. ಆದ್ದರಿಂದ ಕಾಂಗ್ರೆಸ್ ನಲ್ಲಿ 99 ಶಾಸಕರು ಇದ್ದಾರೆ. ಸಂಸದರು ಹಾಗೂ ರಾಜ್ಯಸಭಾ ಸದಸ್ಯರ ಮೊತ್ತವನ್ನೂ ಸೇರಿಸಿ 100 ಕೋಟಿ ರೂ. ನೀಡಲಾಗುವುದು ಎಂದು ಅವರು ಹೇಳಿದರು. 100 ಕೋಟಿ ರೂ. ಮೊತ್ತವನ್ನು ಹೇಗೆ ಯಾರಿಗೆ ನೀಡಬೇಕು. ಲಸಿಕೆ ಖರೀದಿಗೆ ಹೇಗೆ ಬಳಸಬೇಕು ಎಂಬುದನ್ನು ನಾವು ಚಿಂತನೆ ನಡೆಸಿ ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

Latest News

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!

ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.