ಮತಾಂತರ ಹೆಚ್ಚುತ್ತಿರುವ ಹಿನ್ನಲೆ ನಾಳೆ ಆರ್‌ಎಸ್‌ಎಸ್‌ ಬೈಠಕ್

ಬೆಂಗಳೂರು ಅ 20 :   ರಾಜ್ಯದಲ್ಲಿ ದಿನೇದಿನೇ ಮತಾಂತರ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಆರೋಪಗಳು ಕೇಳಿ ಬಂದಿವೆ. ಕಳೆದೊಂದು ವಾರದಿಂದ ದಾಖಲೆಯ ಕ್ರೈಸ್ತ ಮತಾಂತರ ಸಂಬಂಧಿತ ಘಟನೆಗಳು ರಾಜ್ಯದಲ್ಲಿ ವರದಿಯಾಗಿದೆ ಎಂದು ಖುದ್ದು ಬಿಜೆಪಿ ಸಚಿವರೇ ಆರೋಪಿಸಿದ್ದಾರೆ. ಇದನ್ನ ಗಂಭೀರವಾಗಿ ಪರಿಗಣಿಸಿರುವ ಆರ್‌ಎಸ್‌ಎಸ್ ಆಕ್ಟೋಬರ್ 21ಕ್ಕೆ ಮಹತ್ವದ ಸಭೆಯೊಂದನ್ನು ಕರೆದಿದೆ. ಈ ಸಭೆಯಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ತುರ್ತು ಸಮನ್ವಯ ಬೈಠಕ್ ನಡೆಸಲಿದೆ.

ಎಷ್ಟೋ ವರ್ಷಗಳಿಂದ ರಾಜ್ಯದಲ್ಲಿ ಮತಾಂತರ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಇತ್ತೀಚೆಗಂತೂ ದಾಖಲೆ ಪ್ರಮಾಣದಲ್ಲಿ ರಾಜ್ಯದ ಮೂಲೆ ಮೂಲೆಯಲ್ಲೂ ಕ್ರೈಸ್ತ ಮತಾಂತರ ಸಾಕಷ್ಟೂ ಸದ್ದು ಮಾಡುತ್ತಿದೆ. ಇದರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೊಳಿಸಬೇಕು ಎಂದು ಹಿಂದೂಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟಿಸುತ್ತಿವೆ.

ಇದೇ ನೆಪವನ್ನಾಗಿಟ್ಟುಕೊಂಡು ಭಜರಂಗದಳ ಕಾರ್ಯಕರ್ತರು ಹುಬ್ಬಳ್ಳಿಯ ಬೈರಿದೇವರಕೊಪ್ಪದ ಎಜೆ ಚರ್ಚ್ನಲ್ಲಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ದಾಳಿ ನಡೆಸಿದ್ದರು. ಪಾದ್ರಿ ಪ್ರಾರ್ಥನೆ ಮಾಡಿಸುತ್ತಿದ್ದರು ಎಂದು ಚರ್ಚ್‌ಗೆ ನುಗ್ಗಿ ಗಲಾಟೆ ಮಾಡಿದ್ದರು. ಹೀಗೆ ಮಾಡಿದ ಭಜರಂಗದಳ ಕಾರ್ಯಕರ್ತರ ವಿರುದ್ಧ ಅಲ್ಪಸಂಖ್ಯಾತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ರು.

ಮಂಗಳೂರಿನ ಓಲ್ಡ್‌ ಕೆಂಟ್ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮತಾಂತರಕ್ಕೆ ಪುಸ್ತಕ ಹಂಚಿದ್ದಾಗಿ ಹಿಂದೂ ಸಂಘಟನೆ ಆರೋಪ ಮಾಡಿತ್ತು. ಅಲ್ಲದೆ ಕೇರಳ ಮೂಲದ ವ್ಯಕ್ತಿಯೊಬ್ಬನನ್ನು ಹಿಡಿದು ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದರು. ಇದರ ಪೂರ್ವ-ಪರ ಯೋಚಿಸದೆ ಪೊಲೀಸರು ಕೂಡ ಹಿಂದೂಪರ ಸಂಘಟನೆಗಳು ಥಳಿಸಿದ್ದ ವ್ಯಕ್ತಿಯನ್ನು ಬಂಧಿಸಿದ್ದರು.

ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಕುಕ್ಕುಂದೂರುವಿನಲ್ಲಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರಗತಿ ಪ್ರಾರ್ಥನಾಲಯಕ್ಕೆ ನುಗ್ಗಿ ಹಿಂದೂಪರ ಸಂಘಟನೆಗಳ ಮುಖಂಡರು ಗಲಾಟೆ ಮಾಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಕುಂದಾಪುರ ತಾಲೂಕಿನ ಹಳ್ಳಾಡಿ ಎಂಬಲ್ಲಿ ಮನೆಯಲ್ಲಿ ಮತಾಂತರ ನಡೆಯುತ್ತಿದ್ದರು ಎಂದು ನೆಪವೇಳಿ ಅಲ್ಲಿಯೂ ಹಿಂದೂ ಸಂಘಟನೆಗಳು ದಾಳಿ ಮಾಡಿ ಪುಂಡಾಟ ಮೆರೆದಿದ್ದರು.

ಇನ್ನು, ಮಡಿಕೇರಿಯಲ್ಲಿ ಕ್ರೈಸ್ತ ಮತದ ಪರವಾಗಿ ಮಹಿಳೆಯೊಬ್ಬರು ಕರಪತ್ರ ಹಂಚಿದ್ದರು. ಕ್ರೈಸ್ತ ಧರ್ಮ, ಏಸುವನ್ನು ಮಾತ್ರ ನಂಬಿ ಅಂತ ಪ್ರಚಾರ ಮಾಡ್ತಿದ್ದರು ಎಂದು ಆರೋಪಿಸಿದ್ದರು. ದಿಡ್ಡಳ್ಳಿ ಆದಿವಾಸಿಗಳ ಪರ ಹೋರಾಟ ನಡೆಸುತ್ತಿದ್ದವರ ವಿರುದ್ಧವೂ ಹಿಂದೂ ಸಂಘಟನೆಗಳು ಹೀಗೆ ಸುಳ್ಳು ಆರೋಪ ಎಸಗಿದ್ದರು.

ಹೀಗೆ ಆರ್‌ಎಸ್‌ಎಸ್ ಮತ್ತು ಹಿಂದೂ ಸಂಘಟನೆಗಳು ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣಗಳು ಜಾಸ್ತಿಯಾಗುತ್ತಲೇ ಇವೆ. ಹೀಗಿರುವಾಗಲೇ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಚರ್ಚ್ಗಳ ಮೇಲಿನ ದಾಳಿಗಳನ್ನು ಸಮರ್ಥಿಸಿಕೊಂಡು ಹೇಳಿಕೆ ನೀಡಿದ್ದಾರೆ. ಈ ಹೊತ್ತಲೇ ಅಕ್ಟೋಬರ್ 21ಕ್ಕೆ ಆರ್‌ಎಸ್‌ಎಸ್‌, ಬಿಜೆಪಿ ತುರ್ತು ಸಮನ್ವಯ ಬೈಠಕ್ ಅನ್ನು ಕರೆದಿದೆ.

Latest News

ದೇಶ-ವಿದೇಶ

ರೇಷನ್ ಕಾರ್ಡ್ ಹೊಂದಿರುವ ಬಡವರಿಗೆ ರಾಷ್ಟ್ರಧ್ವಜ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ : ರಾಹುಲ್ ಗಾಂಧಿ

ಇದು ಬಿಜೆಪಿ ಸರ್ಕಾರದ ಪ್ರಚಾರ ಪಿತೂರಿ. ಈ ರೀತಿ ಮಾಡುವ ಮೂಲಕ ಬಿಜೆಪಿಯು “ರಾಷ್ಟ್ರೀಯತೆ”ಯನ್ನು ಮಾರಾಟ ಮಾಡುತ್ತಿದೆ ಮತ್ತು ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.