• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ RTO ಕಾರ್ಯಾಚರಣೆ: 20 ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿಗಳು ವಶಕ್ಕೆ, ಚಾಲಕರ ಆಕ್ರೋಶ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರಿನಲ್ಲಿ RTO ಕಾರ್ಯಾಚರಣೆ: 20 ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿಗಳು ವಶಕ್ಕೆ, ಚಾಲಕರ ಆಕ್ರೋಶ
0
SHARES
10
VIEWS
Share on FacebookShare on Twitter

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ವಿರುದ್ಧ (RTO seized bike taxis ) RTO ದಾಳಿ: 20ಕ್ಕೂ ಹೆಚ್ಚು ವಾಹನಗಳು ವಶಕ್ಕೆ

ಅನಧಿಕೃತ ಸೇವೆ ನೀಡುತ್ತಿದ್ದ ವಾಹನಗಳ ಮೇಲೆ ಕಠಿಣ ಕ್ರಮ; ಚಾಲಕರಿಗೆ ₹10,000 ರಿಂದ ₹15,000ರವರೆಗೆ ದಂಡ ವಿಧಿಸುವುದಾಗಿ ಎಚ್ಚರಿಕೆ

ಪೂರ್ವ ಸೂಚನೆ ಇಲ್ಲದೆ ವಾಹನ ಸೀಜ್ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಚಾಲಕರು

Bengaluru: ಇಂದು ಬೆಳ್ಳಂಬೆಳಗ್ಗೆ ಅನಧಿಕೃತ ಬೈಕ್ ಟ್ಯಾಕ್ಸಿ ಸೇವೆಗಳ ವಿರುದ್ಧ ಪ್ರಾದೇಶಿಕ (RTO seized bike taxis) ಸಾರಿಗೆ ಇಲಾಖೆ (RTO) ಬೃಹತ್ ಕಾರ್ಯಾಚರಣೆ ನಡೆಸಿದ್ದು,20 ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿಗಳನ್ನು ವಶಕ್ಕೆ ಪಡೆದಿದೆ.

ಇತ್ತೀಚಿನ ದಿನಗಳಲ್ಲಿ ಆಟೋ ಮತ್ತು ಕ್ಯಾಬ್ ಚಾಲಕರು ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸುತ್ತಿದ್ದರು.

RTO seized bike taxis

ಇದೇ ವೇಳೆ “ಒನ್ ಸಿಟಿ, ಒನ್ ರೇಟ್” (One City, One Rate) ನೀತಿ ಜಾರಿಗೆ ತರಬೇಕೆಂಬ ಬೇಡಿಕೆಯೂ ಜೋರಾಗಿತ್ತು. ಈ ಹಿನ್ನೆಲೆ ಅಧಿಕಾರಿಗಳು ನಗರದ ವಿವಿಧ ಭಾಗಗಳಲ್ಲಿ ವಿಶೇಷ ತಪಾಸಣೆ ನಡೆಸಿ, ಆ್ಯಪ್‌ಗಳ ಮೂಲಕ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಬೈಕ್ ಟ್ಯಾಕ್ಸಿಗಳನ್ನು ತಡೆದು ಪರಿಶೀಲಿಸಿದರು.

ಕಾರ್ಯಾಚರಣೆಯಲ್ಲಿ ಅಧಿಕಾರಿಗಳ ಜೊತೆಗೆ ಕೆಲ ಆಟೋ ಚಾಲಕರು ಪ್ರಯಾಣಿಕರ ರೂಪದಲ್ಲಿ ರೈಡ್ ಬುಕ್ ಮಾಡಿ ಬೈಕ್ ಟ್ಯಾಕ್ಸಿಗಳನ್ನು ಪತ್ತೆಹಚ್ಚಿದ ಘಟನೆ ಗಮನ ಸೆಳೆಯಿತು.

ಕಾರ್ಯಾಚರಣೆ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ಖಾಸಗಿ ಬಳಕೆಗೆ (RTO seized bike taxis) ನೋಂದಾಯಿಸಿರುವ ವೈಟ್ ಬೋರ್ಡ್ (White Board) ಬೈಕ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಕಾನೂನುಬಾಹಿರ ಎಂದು ಸ್ಪಷ್ಟಪಡಿಸಿದ್ದಾರೆ.

ಇಂತಹ ವಾಹನಗಳನ್ನು ಟ್ಯಾಕ್ಸಿಯಾಗಿ ಬಳಸುತ್ತಿರುವುದು ಕಂಡುಬಂದರೆ ಮೋಟಾರು ವಾಹನ ಕಾಯ್ದೆಯ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ನಿಯಮ ಉಲ್ಲಂಘಿಸಿದ ವಾಹನಗಳ ನೋಂದಣಿ ಪ್ರಮಾಣಪತ್ರ (RC) ಅಮಾನತುಗೊಳಿಸುವ ಪ್ರಕ್ರಿಯೆಯ ಜೊತೆಗೆ, ಪ್ರತಿ ವಾಹನಕ್ಕೂ ₹10,000ರಿಂದ ₹15,000ರವರೆಗೆ ದಂಡ

ವಿಧಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ಸುರಕ್ಷತೆ ಹಾಗೂ ಸಾರಿಗೆ ನಿಯಮಗಳ ಪಾಲನೆಗಾಗಿ ಈ ಕ್ರಮ ಅಗತ್ಯವಾಗಿದೆ ಎಂದು ಇಲಾಖೆ ಹೇಳಿದೆ.

ಇನ್ನೊಂದೆಡೆ, ಈ ಕ್ರಮದ ವಿರುದ್ಧ ಬೈಕ್ ಟ್ಯಾಕ್ಸಿ ಚಾಲಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ವಾಹನಗಳನ್ನು ವಶಕ್ಕೆ ಪಡೆಯುತ್ತಿರುವುದು ಅನ್ಯಾಯ ಎಂದು ಅವರು ಆರೋಪಿಸಿದ್ದಾರೆ.

ಹಲವು ಚಾಲಕರು ಆ್ಯಪ್‌ಗಳ ಮೂಲಕ ಪಾರದರ್ಶಕವಾಗಿ ಸೇವೆ ನೀಡುತ್ತಿದ್ದೇವೆ, ಪ್ರಯಾಣಿಕರಿಗೆ ಸುರಕ್ಷಿತ ಸೇವೆಯನ್ನು ಒದಗಿಸುತ್ತಿದ್ದೇವೆ. ಹಾಗಿದ್ದರೂ ನಮ್ಮ ಸೇವೆಯನ್ನು ಕಾನೂನುಬಾಹಿರ ಎಂದು ಪರಿಗಣಿಸುವುದು ಸರಿಯಲ್ಲ ಎಂದು ಪ್ರಶ್ನಿಸಿದ್ದಾರೆ.

ದಿನನಿತ್ಯದ ಆದಾಯದ ಮೇಲೆ ಅವಲಂಬಿತರಾಗಿರುವ ಸಾವಿರಾರು ಕುಟುಂಬಗಳಿಗೆ ಈ ಕ್ರಮ ದೊಡ್ಡ ಹೊಡೆತ ನೀಡಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆಟೋ ಮತ್ತು ಕ್ಯಾಬ್ ಚಾಲಕರ ಸಂಘಟನೆಗಳು ಮಾತ್ರ ಈ ಕಾರ್ಯಾಚರಣೆಯನ್ನು ಸ್ವಾಗತಿಸಿವೆ. ಅನಧಿಕೃತ ಬೈಕ್ ಟ್ಯಾಕ್ಸಿಗಳಿಂದ ತಮ್ಮ ಆದಾಯದಲ್ಲಿ ಭಾರೀ ಕುಸಿತ ಉಂಟಾಗಿದೆ ಎಂದು ಅವರು ಬಹಳ ದಿನಗಳಿಂದ ದೂರಿಡುತ್ತಿದ್ದರು.

ಎಲ್ಲ ಸಾರಿಗೆ ಸೇವೆಗಳಿಗೂ ಒಂದೇ ರೀತಿಯ ನಿಯಮಗಳು ಅನ್ವಯಿಸಬೇಕು ಹಾಗೂ ಪರವಾನಗಿ ಇಲ್ಲದೆ ಯಾವುದೇ ವಾಣಿಜ್ಯ ಸಾರಿಗೆ ನಡೆಯಬಾರದು ಎಂಬುದು

ಅವರ ಪ್ರಮುಖ ವಾದವಾಗಿದೆ. ಸರ್ಕಾರವು ಈಗ ಕೈಗೊಂಡಿರುವ ಕ್ರಮದಿಂದ ನ್ಯಾಯಸಮ್ಮತ ಸ್ಪರ್ಧೆಗೆ ಅವಕಾಶ ಸಿಗಲಿದೆ ಎಂದು ಸಂಘಟನೆಗಳು ಅಭಿಪ್ರಾಯ ವ್ಯಕ್ತಪಡಿಸಿವೆ.

ಜೊತೆಗೆ, ನಗರದಲ್ಲಿ “ಒನ್ ಸಿಟಿ, ಒನ್ ರೇಟ್” ವ್ಯವಸ್ಥೆಯನ್ನು ಜಾರಿಗೆ ತರಬೇಕೆಂಬ ಬೇಡಿಕೆಯನ್ನು ಮತ್ತೆ ಪುನರುಚ್ಚರಿಸಿವೆ.

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಕುರಿತ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಸಾರ್ವಜನಿಕರು, ಚಾಲಕರು ಹಾಗೂ ಸಾರಿಗೆ ಇಲಾಖೆ ನಡುವಿನ ಭಿನ್ನಾಭಿಪ್ರಾಯ ಮುಂದುವರಿದಿದೆ.

ಒಂದು ಕಡೆ ಕಡಿಮೆ ವೆಚ್ಚದಲ್ಲಿ ವೇಗವಾಗಿ ಸಂಚರಿಸಲು ಬೈಕ್ ಟ್ಯಾಕ್ಸಿಗಳು ಸಹಾಯಕವಾಗಿವೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದ್ದರೆ, ಮತ್ತೊಂದೆಡೆ ಕಾನೂನುಬದ್ಧ ಅನುಮತಿ

ಮತ್ತು ಸುರಕ್ಷತಾ ನಿಯಮಗಳ ಪಾಲನೆ ಅಗತ್ಯ ಎಂಬ ವಾದವೂ ಬಲವಾಗಿ ಕೇಳಿಬರುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿ ಸೇವೆಗಳ ಕುರಿತು ಸ್ಪಷ್ಟ ನೀತಿ

ರೂಪಿಸುತ್ತದೆಯೇ ಅಥವಾ ಈಗಿನಂತೆಯೇ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದುವರಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ಅಷ್ಟರಲ್ಲಿಯೇ ನಗರದಲ್ಲಿ

ಬೈಕ್ ಟ್ಯಾಕ್ಸಿ ಸೇವೆ ಬಳಸುವವರು ಹಾಗೂ ಈ ಕ್ಷೇತ್ರದಲ್ಲಿ ಉದ್ಯೋಗ ಮಾಡಿಕೊಂಡಿರುವವರು ಅನಿಶ್ಚಿತತೆಯಲ್ಲೇ ಮುಂದುವರಿಯುವ ಸಾಧ್ಯತೆ ಇದೆ.

ಇದನ್ನು ಓದಿ : https://vijayatimes.com/insurance-mandatory-to-refuel/

Tags: bengalurubikeRTOtaxi

Related News

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ
ಪ್ರಮುಖ ಸುದ್ದಿ

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ

August 19, 2026
ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ
ಪ್ರಮುಖ ಸುದ್ದಿ

ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ

August 19, 2026
ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ
ಪ್ರಮುಖ ಸುದ್ದಿ

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

August 18, 2026
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು
ದೇಶ-ವಿದೇಶ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು

August 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.