ಬೆಂಗಳೂರು, ಡಿ. 23: ಹೊಸ ರೂಪಾಂತರದೊಂದಿಗೆ ಕಾಣಿಸಿಕೊಂಡಿರುವ ಕೊರೊನಾ ವೈರಸ್ ವಿಚಾರದಲ್ಲಿ ಸರ್ಕಾರ ಕಿಂಚಿತ್ತೂ ನಿರ್ಲಕ್ಷ್ಯ ತೋರಿದೆ, ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು ಹೊಸ ರೂಪದೊಂದಿಗೆ ಕಾಣಿಸಿಕೊಂಡಿರುವ ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ತಜ್ಞರ ಸಲಹೆಯೊಂದಿಗೆ ಮುಖ್ಯಮಂತ್ರಿಗಳು
ತಕ್ಷಣ ಮುನ್ನೆಚ್ಚರಿಕೆಯ ಕ್ರಮಗಳಿಗೆ ಮುಂದಾಗಬೇಕು. ಕಳೆದ ಬಾರಿಯ ನಿರ್ಲಕ್ಷ್ಯದಿಂದಾಗಿರುವ ದುಷ್ಪರಿಣಾಮದ ಪಾಠ ನೆನಪಲ್ಲಿರಲಿ.
ರೂಪಾಂತರಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ತಕ್ಷಣ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಕಟ್ಟುನಿಟ್ಟಿನ ಪರೀಕ್ಷಗೆ ಒಳಪಡಿಸಬೇಕು. ಇದರಲ್ಲಿ ರಿಯಾಯಿತಿ, ವಿನಾಯಿತಿ, ನಿರ್ಲಕ್ಷ್ಯ ಸಲ್ಲದು.
ಅಲ್ಲದೇ ರೂಪಾಂತರಿ ಕೊರೊನಾ ವೈರಸ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹ ನಿರ್ಲಕ್ಷ್ಯ ಮಾಡದೆ ಕಡ್ಡಾಯವಾಗಿ ಮಾಸ್ಕ್ ಹಾಕಿ, ಸಾನಿಟೈಸರ್ ಬಳಸಿ, ದೈಹಿಕ ಅಂತರ ಕಾಪಾಡಿ ಸಹಕರಿಸಬೇಕು ಎಂದು ಹೇಳಿದ್ದಾರೆ.
ರೂಪಾಂತರಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ತಕ್ಷಣ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಕಟ್ಟುನಿಟ್ಟಿನ ಪರೀಕ್ಷಗೆ ಒಳಪಡಿಸಬೇಕು.
— Siddaramaiah (@siddaramaiah) December 23, 2020
ಇದರಲ್ಲಿ ರಿಯಾಯಿತಿ, ವಿನಾಯಿತಿ, ನಿರ್ಲಕ್ಷ್ಯ ಸಲ್ಲದು@CMofKarnataka @mla_sudhakar #COVIDSecondWave #Covid19UK
2/3