ಎಸ್‌.ಪಿ.ಬಿ ಹೆಸರಿನಲ್ಲಿ ಸಂಗೀತ ಪೀಠ ಸ್ಥಾಪನೆ

ಮೈಸೂರು, ನ. 26 : ಸ್ವರ ಮಾಂತ್ರಿಕ  ವಿಶ್ವ  ಪ್ರಸಿದ್ದ ದಿವಂಗತ ಖ್ಯಾತ ಹಿನ್ನಲೆ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಹೆಸರಿನಲ್ಲಿ  ಸಂಗೀತ ಪೀಠ ಸ್ಥಾಪನೆ ಮಾಡಲು ಮೈಸೂರು ವಿಶ್ವವಿದ್ಯಾನಿಲಯ ನಿರ್ಧರಿಸಿದೆ.

ಈ ಹಿನ್ನಲೆಯಲ್ಲಿ ಸಂಗೀತ ಪೀಠ ಸ್ಥಾಪನೆಗೆ ವಿಶ್ವವಿದ್ಯಾನಿಲಯ ಸಿಂಡಿಕೇಟ್ ಅನುಮೋದನೆ ನೀಡಿದೆ. ವಿಶ್ವವಿದ್ಯಾನಿಲಯದ ಲಲಿತಕಲಾ ಕಾಲೇಜಿನಲ್ಲಿ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಹೆಸರಿನ ಸಂಗೀತ ಪೀಠ ಪ್ರಾರಂಭವಾಗಲಿದ್ದು ಇದಕ್ಕಾಗಿ ವಾರ್ಷಿಕ ಐದು ಲಕ್ಷ ಮೀಸಲು ಇರಿಸಲಾಗುತ್ತದೆ. ಈ ಹಣದಲ್ಲಿ ವಿಶೇಷ ಉಪನ್ಯಾಸ, ಕಾರ್ಯಾಗಾರ, ಪ್ರಾತ್ಯಕ್ಷಿಕೆ. ಗ್ರಂಥ ಪ್ರಕಟಣೆ ಸೇರಿ ವಿವಿಧ ಶೈಕ್ಷಣಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ವಿವಿ ಪ್ರಕಟಣೆ ಯಲ್ಲಿ ತಿಳಿಸಿದೆ.

Exit mobile version