ಎಸ್ ನಾರಾಯಣ್ ಗೆ ಮಗನ ಆಕ್ಷನ್!

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಎಸ್ ನಾರಾಯಣ್ ಅವರು ತಮ್ಮ ಪುತ್ರನ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ.‌ ಚಿತ್ರದಲ್ಲಿ ಅವರಿಗೆ ಪುತ್ರ ಪವನ್ ದೃಶ್ಯದ ಬಗ್ಗೆ ವಿವರಿಸುವ ಸನ್ನಿವೇಶವನ್ನು ಚಿತ್ರೀಕರಿಸಲಾಗಿದ್ದು, ಅದರ ಮೇಕಿಂಗ್ ವಿಡಿಯೋ ಸಾಮಾಜಿಕ ‌ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಚಿತ್ರದ ಹೆಸರು ‘ನವಮಿ 9.9.1999’ ಎಂದಾಗಿದ್ದು, ಚಿತ್ರದಲ್ಲಿ ಎಸ್ ನಾರಾಯಣ್ ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‌

ಈಗಾಗಲೇ ಮಾತಿನ ಭಾಗದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ.‌ ಫೈಟ್ ಹಾಗೂ ಹಾಡುಗಳ ಚಿತ್ರೀಕರಣ ‌ಬಾಕಿಯಿದೆ. ಬೆಂಗಳೂರು, ಶಿವಗಂಗೆ, ಸಕಲೇಶಪುರದಲ್ಲಿ 40 ದಿನಗಳ ಚಿತ್ರೀಕರಣ ನಡೆದಿದೆ.
ಉತ್ಸುಕ ನವ ಯುವಕರ ತಂಡವೊಂದು ಲಾಕ್ ಡೌನ್ ದಿನಗಳಲ್ಲಿ ಕಥೆ ಬರೆದಿದ್ದು, ಪವನ್ ಎಸ್‌ ನಾರಾಯಣ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ತಂದೆಯ ಗರಡಿಯಲ್ಲಿ ಪಳಗಿರುವ ಪವನ್ ಈಗ ಸ್ವತಂತ್ರ ನಿರ್ದೇಶಕನಾಗಿ ಈ ಸಿನಿಮಾದ ಮುಖಾಂತರ ಹೆಜ್ಜೆ ಇಡುತ್ತಿದ್ದಾರೆ. ಚಿತ್ರದ ನಾಯಕ ನಟ ಯಶಸ್ ಅಭಿ. ಈ ಹಿಂದೆ ‘ಪ್ರಸೆಂಟ್ ಪ್ರಪಂಚ ಜೀರೋ ಪರ್ಸೆಂಟ್ ಲವ್’ ಹಾಗೂ ‘ಕ್ರಿಟಿಕಲ್ ಕೀರ್ತನೆಗಳು’ ಚಿತ್ರಗಳಲ್ಲಿ ‌ನಟಿಸಿದ್ದಾರೆ.

ನಾಯಕ ನಟ ಯಶಸ್ ಅಭಿ ಮತ್ತು ಕೃಷ್ಣ ಗುಡೆಮಾರನ ಹಳ್ಳಿ ಯವರು ಸೇರಿ ಚಿತ್ರಕತೆ ರಚಿಸಿ, ಪದ್ಮ ಸುಂದರಿ ಕ್ರಿಯೇಷನ್ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ. ಈ ಚಿತ್ರಸಲ್ಲಿವ ಮಾಡುತ್ತಿದ್ದಾರೆ. ನಂದಿನಿ ಗೌಡ ಈ ಚಿತ್ರದ ನಾಯಕಿ.

ಎಸ್.ನಾರಾಯಣ್, ಶಂಕರ್ ಅಶ್ವಥ್, ಓಂ ಪ್ರಕಾಶ್ ರಾವ್, ಹುಚ್ಚ ವೆಂಕಟ್, ಸಂದೀಪ್ ಕುಮರ್ ಜಿ.ಎಂ, ಅನುಶ್ರಿ, ಪವಿತ್ರ, ಕುರಿಬಾಂಡ್ ಸುನೀಲ್, ಅರುಣ ಬಾಲರಾಜ್ ಮುಂತಾದವರು ಈ‌ ಚಿತ್ರದ ತಾರಾಬಳಗದಲ್ಲಿದ್ದಾರೆ.

ತಾಂತ್ರಿಕ ವರ್ಗದಲ್ಲಿ ಪಿ.ಕೆ.ಎಚ್.ಎಸ್. ರವರ ಛಾಯಾಗ್ರಹಣ, ಗಿರಿಧರ್ ದಿವಾನ್ ರವರ ಸಂಗೀತ ನಿರ್ದೇಶನ, ನಾಗಾರ್ಜುನ್ ಶರ್ಮ ರವರ ಸಾಹಿತ್ಯ, ಮಾಸ್ ಮಾದ, ಅಲ್ಟಿಮೇಟ್ ಶಿವು ಅವರ ಸಾಹಸ ನಿರ್ದೇಶನ ಹಾಗೂ ಮೋಹನ್ ರವರ ನೃತ್ಯ ಸಂಯೋಜನೆ ಈ ಚಿತ್ರಕ್ಕಿದೆ
ಶಶಿಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಾಹಿಸುತ್ತಿದ್ದಾರೆ.

ನವರಾತ್ರಿ ಸಂದರ್ಭದಲ್ಲಿ ನವ ನಿರ್ದೇಶಕರು ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದರು. ಲೋಕೇಶನ್ ಸ್ಪಾನ್ಸರ್ ಜಿ.ಎನ್.ನರಸಿಂಹಯ್ಯ ಅವರಿಗೆ ಚಿತ್ರತಂಡ ವಿಶೇಷ ಅಭಿನಂದನೆ ಸಲ್ಲಿಸಿದೆ.

Exit mobile version