`ಪರಿಸರ ರಾಯಭಾರಿʼ ಸಾಲುಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ

saalumarada

ಸಾಲುಮರದ ತಿಮ್ಮಕ್ಕ(Saalumarada Thimakka) ಅವರನ್ನು `ಪರಿಸರ ರಾಯಭಾರಿʼಯನ್ನಾಗಿ(Environament Ambassador) ನೇಮಿಸಿ ರಾಜ್ಯ ಬಿಜೆಪಿ(BJP) ಸರ್ಕಾರ(Government) ಆದೇಶ ಹೊರಡಿಸಿದೆ. ಅದೇ ರೀತಿ ಇದೇ ಮೊದಲ ಬಾರಿಗೆ ಪರಿಸರ ರಾಯಭಾರಿಗೆ ಸಂಪುಟ ದರ್ಜೆಯ ಸ್ಥಾನಮಾನವನ್ನು ನೀಡಲಾಗಿದೆ.


ಸಾಲುಮರದ ತಿಮ್ಮಕ್ಕ ಅವರು ಪರಿಸರ ರಾಯಭಾರಿಯಾಗಿ ರಾಜ್ಯ ಮತ್ತು ಹೊರರಾಜ್ಯಗಳಿಗೆ ಪ್ರವಾಸಗಳನ್ನು ಕೈಗೊಂಡರೆ ಅದರ ಸಂಪೂರ್ಣ ಖರ್ಚನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಅವರಿಗೆ ಕಾರು, ಭದ್ರತೆ, ಭತ್ಯೆ, ಆಹಾರ ಸೇರಿದಂತೆ ಅನೇಕ ಸವಲತ್ತುಗಳನ್ನು ನೀಡಲಾಗುತ್ತಿದೆ. ಸಾಲುಮರದ ತಿಮ್ಮಕ್ಕ ಅವರನ್ನು `ಪರಿಸರ ರಾಯಭಾರಿʼಯಾಗಿ ನೇಮಿಸಲಾಗುವುದು ಎಂದು ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ತಿಳಿಸಿದ್ದರು. ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.


ಇನ್ನು ಸಾಲುಮರದ ತಿಮ್ಮಕ್ಕ ಅವರು ತಮ್ಮ ಅನನ್ಯ ಸಾಧನೆಗಾಗಿ ಅನೇಕ ಸನ್ಮಾನಗಳು ಮತ್ತು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಅವುಗಳೆಂದರೆ, ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ – ಇವರಿಂದ ಮಾನ್ಯತೆಯ ಪ್ರಮಾಣ ಪತ್ರ, ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು – ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ. ೨೦೧೯ ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರಿಗೆ ಪದ್ಮಶ್ರೀ(Padmashree) ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.


೨೦೨೦ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್, ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ – ೨೦೦೦, ಗಾಡ್ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ – ೨೦೦೬, ರಾಷ್ಟ್ರೀಯ ಪೌರ ಪ್ರಶಸ್ತಿ – ೧೯೯೫, ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ – ೧೯೯೭, ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ, ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ, ಹೂವಿನಹೊಳೆ ಪ್ರತಿಷ್ಠಾನದ ವಿಶ್ವಾತ್ಮ ಪುರಸ್ಕಾರ ೨೦೧೫, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ. ೨೦೧೦ರ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಲಭಿಸಿದೆ.

Exit mobile version