ಬೆಂಗಳೂರು: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ನಡೆದಿದೆ.
ಸಚಿವರು ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ನೈಸ್ ರಸ್ತೆಯ ಕದಂಬ ಹೊಟೇಲ್ ಬಳಿ ಕೆಎಸ್‍ಆರ್‍ಟಿಸಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಶ್ರೀನಿವಾಸ ಪೂಜಾರಿ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಅದೃಷ್ಠವಶಾತ್ ಚಾಲಕನ ಜಾಗರುಕತೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ.