ಸಚಿವ ಸಂಪುಟ ವಿಸ್ತರಣೆ: ಅಸಮಾಧಾನಿತರು ದೆಹಲಿಗೆ ಹೋಗಿ ಪಕ್ಷದ ವರಿಷ್ಠರಲ್ಲಿ ದೂರು ನೀಡಲಿ: ಬಿಎಸ್‌ವೈ

ಬೆಂಗಳೂರು, ಜ. 14: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿ ಶಾಸಕರ ಅಸಮಾಧಾನ ಭುಗಿಲೆದ್ದಿದ್ದು, ಈ ನಡುವೆ ಅಸಮಾಧಾನಿತ ಶಾಸಕರಿಗೆ ಖಡಕ್ ವಾರ್ನಿಂಗ್ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಪುಟ ವಿಸ್ತರಣೆಯಲ್ಲಿ ಯಾರಿಗೆ ಅಸಮಾಧಾನವಿದೆ ಆ ಶಾಸಕರು ದೆಹಲಿಗೆ ಹೋಗಿ ಪಕ್ಷದ ವರಿಷ್ಠರಲ್ಲಿ ದೂರು ನೀಡಿ. ಈ ಬಗ್ಗೆ ನನಗೆ ಅಭ್ಯಂತರವಿಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಶಾಸಕರಿಗೆ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಅಸಮಾಧಾನವಿದೆಯೋ ಆ ಶಾಸಕರು ದೆಹಲಿಗೆ ಹೋಗಿ ಪಕ್ಷದ ವರಿಷ್ಠರಲ್ಲಿ ದೂರು ನೀಡಿ. ಈ ಬಗ್ಗೆ ನನಗೆ ಅಭ್ಯಂತರವಿಲ್ಲ.

ಅತೃಪ್ತ ಶಾಸಕರು ಮನಸ್ಸಿಗೆ ಬಂದಂತೆ ಮಾತನಾಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂತ ಕೆಲಸವನ್ನು ಮಾಡಬಾರದು. ಯಾವುದೇ ಬೆಳವಣಿಗೆಯಾದಲ್ಲಿ ಕೂಡಾ ಪಕ್ಷದ ವರಿಷ್ಠರು ಸೂಕ್ತವಾದ ಕ್ರಮ ತೆಗೆದುಕೊಳ್ಳುತ್ತಾರೆ” ಎಂದು ತಿಳಿಸಿದ್ದಾರೆ. “ಯಾವುದು ತಪ್ಪೋ ಅಥವಾ ಯಾವುದು ಸರಿ ಎನ್ನುವುದು ಪಕ್ಷದ ವರಿಷ್ಠರಿಗೆ ಗೊತ್ತಿದೆ. ನಮ್ಮ ಶಾಸಕರು ಸುಖಾಸುಮ್ಮನೆ ಹೇಳಿಕೆ ನೀಡುವ ಬದಲಾಗಿ ವರಿಷ್ಠರ ಬಳಿ ತೆರಳಿ ದೂರು ಸಲ್ಲಿಸಲಿ ಎಂದಿದ್ದಾರೆ.

Latest News

ಪ್ರಮುಖ ಸುದ್ದಿ

ತಾಜುದ್ದೀನ್ಜುನೈದೀ ಮತ್ತು  ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ

ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.