ಮಾಜಿ ಸಚಿವ ಶಾಮನೂರು ಮೆಡಿಕಲ್ ಕಾಲೇಜ್ ಮೇಲೆ ಐಟಿ ದಾಳಿ

ಕಾಂಗ್ರೆಸ್ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಇಂದು ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಗೋವಾ ಹಾಗೂ ಬೆಳಗಾವಿಯಿಂದ ಬಂದ ಆರು ಜನ ಐಟಿ ಅಧಿಕಾರಿಗಳ ತಂಡ ಶಾಮನೂರು ಶಿವಶಂಕರಪ್ಪ ಒಡೆತನದಲ್ಲಿರುವ ದಾವಣಗೆರೆಯ ಜೆಜೆಎಂ, ಎಸ್ಎಸ್ ಮೆಡಿಕಲ್ ಕಾಲೇಜ್ ಹಾಗೂ ಬಾಪೂಜಿ ಡೆಂಟಲ್ ಕಾಲೇಜ್ಗಳಲ್ಲಿ ಕಡತ ಪರಿಶೀಲನೆ ನಡೆಸುತ್ತಿದ್ದಾರೆ.

ಈ ವೇಳೆ ವಿದ್ಯಾರ್ಥಿಗಳ ಕಾಲೇಜ್ ಆಡಳಿತ ಮಂಡಳಿ ಸಂಗ್ರಹಿಸಿದ ಶುಲ್ಕ ಮತ್ತು ಸರ್ಕಾರ ನಿಗದಿ ಮಾಡಿದ ಶುಲ್ಕದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಕೆಲ ವಿದ್ಯಾರ್ಥಿನ್ನು ಅನಿರೀಕ್ಷಿತವಾಗಿ ಭೇಟಿ ಮಾಡಿ ಶುಲ್ಕ ತುಂಬದ ವಿವರ ಪಡೆದಿದ್ದಾರೆ.

ಮಂಗಳೂರಿನ ಪ್ರತಿಷ್ಠಿತ ಎಜೆ ಶೆಟ್ಟಿ, ಯೆನಪೋಯ ಆಸ್ಪತ್ರೆಗಳ ಮೇಲೆ ಐಟಿ ರೇಡ್ಮಂಗಳೂರು: ಬೆಳ್ಳಬೆಳಗ್ಗೆ ನಗರದ ಪ್ರತಿಷ್ಠಿತ ಆಸ್ಪತ್ರೆಯ ಆಸ್ಪತ್ರೆ ನಡೆಸುತ್ತಿರುವ ಮೂವರು ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆದಿದೆ.ಮಂಗಳೂರು: ಬೆಳ್ಳಬೆಳಗ್ಗೆ ನಗರದ ಪ್ರತಿಷ್ಠಿತ ಆಸ್ಪತ್ರೆಯ ಆಸ್ಪತ್ರೆ ನಡೆಸುತ್ತಿರುವ ಮೂವರು ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆದಿದೆ.

ಎಜೆ ಗ್ರೂಪ್ ಸಂಸ್ಥೆಯ ಮಾಲಕ ಎಜೆ ಶೆಟ್ಟಿ, ಯೆನಪೋಯ ಗ್ರೂಪ್ ಸಂಸ್ಥೆಯ ಮಾಲಕ ಅಬ್ದುಲ್ ಕುಂಞ ಹಾಗೂ ಕಣಚೂರು ಗ್ರೂಪ್ ಸಂಸ್ಥೆಯ ಮಾಲಕ ಕಣಚೂರು ಮೋನು ಅವರ ಕಚೇರಿ ಮತ್ತು ಮನೆಯ ಮೇಲೆ ದಾಳಿ ನಡೆಸಲಾಗಿದೆ.

ಮೂರೂ ಸಂಸ್ಥೆಗಳ ಮನೆ,ಆಸ್ಪತ್ರೆ, ಕಚೇರಿ ಮೇಲೆ ಏಕಕಾಲದಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿಕ್ಷಣ ಸಂಸ್ಥೆಗಳ ಮೇಲೂ ಏಕಕಾಲದಲ್ಲಿ ಐಟಿ ದಾಳಿ ನಡೆದಿದ್ದೂ, ಏಳು ಮಂದಿ ಅಧಿಕಾರಿಗಳ ತಂಡದಿಂದ ಐಟಿ ದಾಳಿ ನಡೆದಿದ್ದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

Exit mobile version