ಬೆಂಗಳೂರು, ಡಿ. 24: ಉಪಚುನಾವಣೆಯ ಬಳಿಕ ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಗೊಳ್ಳಬೇಕಾಗಿದೆ. ಬಿಜೆಪಿ ಹೈಕಮಾಂಡ್ ಸಂಪುಟ ಪುನರ್ ರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಮೂಲಕ ಸಿಎಂ ಯಡಿಯೂರಪ್ಪ ಅವರು ಹೊಸ ವರ್ಷಕ್ಕೆ ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಕೊಡಲು ಮುಂದಾಗಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಬಿಜೆಪಿ ಹೈಕಮಾಂಡ್ ರಾಜ್ಯ ಸಚಿವ ಸಂಪುಟ ಪುನರ್ ರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ತಮ್ಮ ಕಚೇರಿಯಿಂದ ಖಾಲಿ ಇರುವಂತ ಎಲ್ಲಾ ಸ್ಥಾನಗಳಿಗೂ ಸಚಿವರನ್ನು ಆಯ್ಕೆ ಮಾಡಿ, ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಗೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಹೊಸ ವರ್ಷಕ್ಕೆ ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಗೋ ಸಾಧ್ಯತೆ ಇದೆ.
ಒಂದು ವೇಳೆ ಬಿಜೆಪಿ ಹೈಕಮಾಂಡ್ ಸಿಎಂ ಯಡಿಯೂರಪ್ಪ ಕಳುಹಿಸಿಕೊಟ್ಟಿರುವಂತ ಸಚಿವರ ಪಟ್ಟಿಗೆ ಒಪ್ಪಿಗೆ ಸೂಚಿಸಿದ್ದಲ್ಲಿ, ಸಚಿವ ಸಂಪುಟದಲ್ಲಿರುವಂತ ಹಾಲಿ ಇಬ್ಬರು ಶಾಸಕರಿಗೆ ಕೋಕ್ ನೀಡಿ, ಹೊಸ ಸಚಿವಾಕಾಂಕ್ಷಿಗಳಿಗೆ ಅವಕಾಶ ನೀಡಲಾಗುತ್ತದೆ. ಎಂದು ತಿಳಿದು ಬಂದಿದೆ.