ಮೋದಿಗಾಗಿ ನಾನು ಬಿಜೆಪಿಯಲ್ಲೇ ಇರುತ್ತೇನೆ: ಸದಾನಂದಗೌಡ ಘೋಷಣೆ

Bengaluru: ನರೇಂದ್ರ ಮೋದಿ (Narendra Modi) ಅವರಿಗಾಗಿ ನಾನು ಬಿಜೆಪಿಯಲ್ಲೇ ಇರುತ್ತೇನೆ, ಬಿಜೆಪಿ ಪಕ್ಷವನ್ನು (Sadananda Gowda Declaration) ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ನಾನು

ಹೋಗುವುದಿಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಡಿ.ವಿ. ಸದಾನಂದಗೌಡ (D.V Sadanandagowda) ಅವರು ಘೋಷಣೆ ಮಾಡಿದ್ದಾರೆ.

ಬೆಂಗಳೂರು (Bengaluru) ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಡಿ.ವಿ.ಸದಾನಂದಗೌಡ ಅವರು ಬಿಜೆಪಿ (BJP) ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ,

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಒಂದು ಸುದ್ದಿ ಹರಡಿತ್ತು. ಈ ಸುದ್ದಿಯ ಹಿನ್ನಲೇ ಇಂದು ಬೆಂಗಳೂರಿನಲ್ಲಿ ಮಾದ್ಯಮ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,

ನನಗೆ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿದ್ದು ಸತ್ಯ. ಆದರೆ ನಾನು ಕಾಂಗ್ರೆಸ್ (Congress) ಪಕ್ಷ ಸೇರುವುದಿಲ್ಲ. ನನಗೆ ಬಿಜೆಪಿ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಹೀಗಾಗಿ ನಾನು ಬಿಜೆಪಿಯಲ್ಲೇ ಇದ್ದು, ಪಕ್ಷವನ್ನು

ಶುದ್ದೀಕರಣ ಮಾಡುವ ಕಾರ್ಯದಲ್ಲಿ (Sadananda Gowda Declaration) ತೊಡಗುತ್ತೇನೆ ಎಂದು ಹೇಳಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ಬೇಸರವಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಟಿಕೆಟ್ (Ticket) ಕೈತಪ್ಪಿದ್ದರಿಂದ ನನಗೆ ಬೇಸರವಾಗಿದೆ. ಆದರೆ ನನ್ನನ್ನು

ಅವಮಾನಿಸಿದವರು ಮುಂದೆ ಪಶ್ಚಾತ್ತಾಪ ಅನುಭವಿಸುತ್ತಾರೆ. ಸಹಿಸಿಕೊಳ್ಳುವವರಿಗೆ ತಾಳ್ಮೆ ಇದ್ದರೆ, ದುಃಖ ಕೊಟ್ಟವರು ಇದ್ದೂ ಸತ್ತಂತೆ ಎಂದು ತನ್ನನ್ನು ಅವಮಾನಿಸಿದವರ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ಬಿಜೆಪಿ ಪಕ್ಷವು ಜನಪರವಾದ ಪಕ್ಷ ಆಗಬೇಕು. ಕರ್ನಾಟಕದಲ್ಲಿ ನರೇಂದ್ರ ಮೋದಿ ಅವರ ಪರವಾದ ವಾತಾವರಣ ಸೃಷ್ಟಿಯಾಗಬೇಕು. ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು. ನರೇಂದ್ರ ಮೋದಿ ಅವರು

ಹೇಳಿದಂತಹ ಭ್ರಷ್ಟಾಚಾರವಾದ, ಮೋದಿ ಅವರು ಹೇಳಿದಂತಹ ಜಾತಿವಾದ ಕರ್ನಾಟಕದಲ್ಲಿ (Karnataka) ಇರಬಾರದು. ನನ್ನ ಮಕ್ಕಳಿಗೆ, ನನ್ನ ಕುಟುಂಬದವರಿಗೆ, ನನ್ನ ಸಂಬಂಧಿಕರಿಗೆ, ನನ್ನ ಚೇಲಾಗಳಿಗೆ

ಮಾತ್ರ ಅಧಿಕಾರ ಇರುವಂತಹ ಪಕ್ಷ ಬಿಜೆಪಿಯಾಗಬಾರದು.

ಹೀಗಾಗಿ ಬಿಜೆಪಿಯೊಳಗೆ ಶುದ್ದೀಕರಣ ಆಗುವ ತನಕ ನಾನು ವಿರಮಿಸುವುದಿಲ್ಲ. ಈ ಶುದ್ದೀಕರಣಕ್ಕೆ ವೇಗ ಕೊಡುವಂತದ್ದು ನನ್ನಿಂದ ಮಾತ್ರ ಸಾಧ್ಯ. ಹೀಗಾಗಿ ನಾನು ಬಿಜೆಪಿಯಲ್ಲೇ ಇರುತ್ತೇನೆ, ಪಕ್ಷಕ್ಕಾಗಿ

ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಇದನ್ನು ಓದಿ; ಸಿಎಂ ಹುದ್ದೆಗೆ ಕೇಜ್ರಿವಾಲ್ ರಾಜೀನಾಮೆ ಇಲ್ಲ: ಜೈಲಿನಿಂದಲೇ ಆಡಳಿತ ನಡೆಸಲು ನಿರ್ಧಾರ..!

Exit mobile version